NEWS

ದಿನಸಿ , ತರಕಾರಿ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರಿಕೆ

ಮಂಗಳೂರು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಜಿಲ್ಲೆಗೆ ಹೊರಜಿಲ್ಲೆಗಳಿಂದ ಬರುವ ಆಹಾರ ಸಾಮಾಗ್ರಿಗಳು, ದಿನಸಿ , ತರಕಾರಿ, ಹಣ್ಣು ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಆಹಾರ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಗಟು ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ ತರಕಾರಿ, ಅಕ್ಕಿ, ಹಣ್ಣುಹಂಪಲು ಸೇರಿದಂತೆ ಆಹಾರ ಸಾಮಗ್ರಿಗಳ ಪೂರೈಕೆ ನಿರಂತರವಾಗಿರಬೇಕು. ಅಕ್ಕಿ,  ತರಕಾರಿ, ಹಣ್ಣು ಹಂಪಲು ಸಾಗಿಸುವ ವಾಹನಗಳಿಗೆ ಯಾವುದೇ ಅಡೆತಡೆ ಮಾಡದಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಗೆ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳಿಂದ ತರಕಾರಿ ಹಣ್ಣು ಹಂಪಲು ಸರಬರಾಜು ಆಗುತ್ತಿದ್ದು, ಅಕ್ಕಿ ಉಡುಪಿಯಿಂದ ರವಾನೆಯಾಗುತ್ತದೆ. ಇಂತಹ ವಾಹನಗಳ ಸಂಚಾರಕ್ಕೆ ಯಾವುದೇ ಕಾರಣಕ್ಕೂ ಅಡೆತಡೆ ಮಾಡದಂತೆ  ನೋಡಿಕೊಳ್ಳಬೇಕು ಎಂದರು.
ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ. ಒಂದೇ ಬಾರಿಗೆ ಸಾಮಗ್ರಿಗಳನ್ನು ಖರೀದಿಸುವ ಅಗತ್ಯವಿಲ್ಲ. ಆಹಾರ ಸಾಮಗ್ರಿ ಸಾಕಷ್ಟು ದಾಸ್ತಾನು ಇರುವಂತೆ ಅಹಾರ ಇಲಾಖೆಗೆ ಸೂಚಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲು ಸ್ಥಳೀಯ ತಂಡ ರಚಿಸಿ ನಿಗಾ ಇಡಲು ಸೂಚಿಸಲಾಗಿದೆ. ಜನರು ಅಂಗಡಿಗಳಲ್ಲಿ ಮುಗಿ ಬೀಳಬಾರದು. ಮಾರುಕಟ್ಟೆಯಲ್ಲಿ ಆಹಾರ ಸಾಮಾಗ್ರಿಗಳ ಸರಬರಾಜು ಕೊರತೆಯಾಗದಂತೆ ನಿಗಾ ಇಡಲಾಗಿದೆ ಎಂದು  ತಿಳಿಸಿದರು.

ಅಪರ ಜಿಲ್ಲಾಧಿಕಾರಿ ರೂಪಾ, ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಡಿಸಿಪಿಗಳಾದ ಅರುಣಾಂಶಗಿರಿ, ಲಕ್ಷ್ಮೀಗಣೇಶ್, ಎಎಸ್ಪಿ ವಿಕ್ರಂ ಅಮಾಟೆ, ಆಹಾರ ಇಲಾಖೆ ಜಂಟೀ ನಿರ್ದೇಶಕ ಮಂಜುನಾಥ್, ತಹಸೀಲ್ದಾರ್ ಗಳು ಉಪಸ್ಥಿತರಿದ್ದರು.

ವಿವಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ನಲ್ಲಿ ಪಾಠ
ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ನಿರ್ದೇಶದಂತೆ ಐಸಿಟಿ ಇನಿಶಿಯೇಟಿವ್ ಬಳಸಿಕೊಂಡು ವಿದ್ಯಾರ್ಥಿಗಳಿಗೆ  ಆನ್‍ಲೈನ್ ಮುಖಾಂತರ ವಿಷಯಗಳನ್ನು ಬೋಧನೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ಮನೆಯಿಂದಲೇ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ಮನೆಯಿಂದಲೇ  ವಿಶ್ವವಿದ್ಯಾಲಯ/ ಕಾಲೇಜಿನ ವೆಬ್‍ಸೈಟ್  ಮುಖಾಂತರ ಒದಗಿಸುವಂತೆ ಹಾಗೂ  ಜ್ಞಾನಾರ್ಜನೆಗೆ ಸಹಕರಿಸುವಂತೆ ತಿಳಿಸಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಸಹಕರಿಸುವಂತೆ ಮಂಗಳೂರು ವಿ.ವಿ ಕುಲಸಚಿವರು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು