NEWSನಮ್ಮಜಿಲ್ಲೆ

ನಾನು ರಾಜಕಾರಣ ಮಾಡಲು ಬಂದಿಲ್ಲ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾನು ಇಲ್ಲಿಗೆ ಬಂದಿರುವುದು ಅಭಿವೃದ್ಧಿಗಾಗಿ ಮಾತ್ರ. ರಾಜಕಾರಣ ಮಾಡಲು ಇದು ನನ್ನ ಕ್ಷೇತ್ರವಲ್ಲ. ಯಾರಿಗೋ ಒಬ್ಬರಿಗೆ ಅನುಕೂಲವಾಗುಂತೆ ಕೆಲಸ ಮಾಡುವವನು ನಾನಲ್ಲ. ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಹೊಣೆಯನ್ನು ನನಗೆ ವಹಿಸಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ನಿಯೋಗವು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಸಮಸ್ಯೆಗಳನ್ನು ಪಾಲಿಕೆ ನಿಯೋಗವು ಸಚಿವರ ಗಮನಕ್ಕೆ ತಂದಿದ್ದು, ಈ ಎಲ್ಲ ಸಮಸ್ಯೆಗಳಿಗೂ ಶೀಘ್ರವಾಗಿ ಪರಿಹಾರ ಕಲ್ಪಿಸುವುದಾಗಿ ಸಚಿವರು ಭರವಸೆ ನೀಡಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಮೇ 7ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಅವರ ಜೊತೆ ಸಭೆ ನಡೆಸಿ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ. ಸಚಿವ ಬಸವರಾಜ್ ಅವರೊಂದಿಗೆ ಚರ್ಚಿಸಿ ಪ್ರತಿ ವಾರ್ಡ್‍ಗಳಿಗೆ ಕಾರ್ಪೋರೇಟರ್‍ಗಳ ನಿಧಿಯಿಂದ ಅನುದಾನ ನೀಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್‍ದಾರರಿಗೆ 2 ತಿಂಗಳಿಗೆ ಆಹಾರ ಪದಾರ್ಥ ಕೊಡಬೇಕು. ಬಿಪಿಎಲ್ ಕಾರ್ಡ್‍ಗೆ ಅರ್ಜಿ ಹಾಕಿದವರಿಗೂ ಪಡಿತರ ತಲುಪಿಸಬೇಕೆಂಬ ನಿಯಮ ಸರ್ಕಾರದಿಂದ ಜಾರಿಗೆ ಬಂದಿದೆ. ಹೀಗಾಗಿ ಅಂತಹವರಿಗೂ ಪಡಿತರವನ್ನು ಇನ್ನೆರೆಡು ತಿಂಗಳು ವಿತರಣೆ ಮಾಡಲೇಬೇಕು. ಇದರಲ್ಲಿ ಏನಾದರೂ ಸಮಸ್ಯೆಯಾಗಿದ್ದರೆ ನನ್ನ ಗಮನಕ್ಕೆ ತನ್ನಿ ಪರಿಹರಿಸುತ್ತೇವೆ ಎಂದು ಭರವಸೆ ನೀಡಿದರು.

ಪಾಲಿಕೆ ಬಜೆಟ್ ಮಂಡನೆ ವಿಚಾರವಾಗಿ ಮಾತನಾಡಿದ ಸಚಿವರು,  ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬಜೆಟ್ ಮಂಡಿಸಬೇಕು. ಇಲ್ಲವೇ ಬೆಂಗಳೂರಿನಲ್ಲಿ ಬಿಬಿಎಂಪಿ ಮಂಡಿಸಿದ ಬಜೆಟ್ ಮಾದರಿ ಅನುಸರಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಮಂಡಿಸಬಹುದು ಎಂದು ಸಲಹೆ ನೀಡಿದರು.

ಸಮನ್ವಯತೆ ಕೊರತೆ ಇಲ್ಲ

ಮೈಸೂರು ಮೇಯರ್ ಹಾಗೂ ಕಮೀಷನರ್ ಅವರ ಜೊತೆ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಸಮನ್ವಯತೆಯಿಂದ ಕೆಲಸ ಮಾಡುವಂತೆ ನಾನೂ ಸಹ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇನೆ. ಹೀಗಾಗಿ ಮೇಯರ್-ಉಪಮೇಯರ್ ಹಾಗೂ ಪಕ್ಷಗಳ ಜಿಲ್ಲಾಧ್ಯಕ್ಷರಿಗೆ ಅವರವರ ವ್ಯಾಪ್ತಿಗೆ ಸಂಬಂಧಪಟ್ಟ ಸರ್ಕಾರಿ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಬೇಕೆಂದು ಆಯುಕ್ತರು ಸೇರಿದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು