NEWSಆರೋಗ್ಯನಮ್ಮಜಿಲ್ಲೆ

ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ನಗರವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರವಹಿಸುವ ಪೌರ ಕಾರ್ಮಿಕರ ಕುರಿತಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಶೇಷ ಕಾಳಜಿ ವಹಿಸಿದೆ.

ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 2500 ಪೌರ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿ, ಕೊವೀಡ್-19 ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ.

ನಗರದ ಪಾಲಿಕೆ ಆಸ್ಪತ್ರೆ ವತಿಯಿಂದ ಪ್ರತಿದಿನ ಬೆಳಗ್ಗೆ ದೇಹದ ಉಷ್ಣತೆ ಪರೀಕ್ಷಿಸಲಾಗುತ್ತದೆ. ಬಿ.ಪಿ. ರಕ್ತ ಪರೀಕ್ಷೆ ನಡೆಸಿ ಸಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರ್ತವ್ಯದ ವೇಳೆಯಲ್ಲಿ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವುದು. ಸರಿಯಾಗಿ ಮಾಸ್ಕ್‌ ಹಾಕಿಕೊಳ್ಳುವುದು. ಸ್ಯಾನಿಟೈಸರ್‌ ಬಳಕೆಯ ಕುರಿತು ಪೌರ ಕಾರ್ಮಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಮಹಾನಗರದ ಎಲ್ಲಾ ಪೌರ ಕಾರ್ಮಿಕ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಪಾಲಿಕೆ ವೈದ್ಯಾಧಿಕಾರಿ ಡಾ.ಪ್ರಭು ಬಿರಾದರ ತಿಳಿಸಿದ್ದಾರೆ.

ಕೋವಿಡ್-19 ರೋಗಾಣು ಹರಡುತ್ತಿರುವ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಹಲವು ಸಂಶಯಗಳು ಕಾಡುತ್ತಿದ್ದವು. ವೈದ್ಯಾಧಿಕಾರಿಗಳು ನಮ್ಮನ್ನು ತಪಾಸಣೆ ನಡೆಸಿ ಹಲವು ಮುಂಜಾಗ್ರತಾ ಕ್ರಮಗಳನ್ನು ತಿಳಿಸಿದ್ದಾರೆ. ರಕ್ತ ಹಾಗೂ ಬಿ.ಪಿ. ಪರೀಕ್ಷೆ ಮಾಡಿ ಸಣ್ಣ ಪಟ್ಟು ಕಾಯಿಲೆಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಗುತ್ತಿಗೆ ಪೌರ ಕಾರ್ಮಿಕ ಆನಂದ ಬ್ರಹ್ಮಾವರ ಹೇಳಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ