NEWSನಮ್ಮರಾಜ್ಯ

ಬಗರ್‌ ಹುಕುಂ ಭೂ ಸಾಗುವಳಿದಾರರ ಹಿತ ಕಾಯಲು ಬದ್ಧ

 ಭೂ ಕಬಳಿಕೆ ನಿಷೇಧ ಅಧಿನಿಯಮ ತಿದ್ದುಪಡಿಗೆ ಸಂಪುಟ ಸಭೆ ಒಪ್ಪಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯವು ಕೋವಿಡ್-19 ಮಹಾಮಾರಿಯ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಗರ್‍ಹುಕುಂ ಭೂ ಸಾಗುವಳಿದಾರರ ಹಿತಕಾಯಲು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-2011 ರ ಕೆಲವು ಪರಿಚ್ಛೇಧಗಳಿಗೆ ಸೂಕ್ತ  ತಿದ್ದುಪಡಿ ಮಾಡಿ ಅಧ್ಯಾದೇಶ ಹೊರತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಇಲ್ಲಿ ಇಂದು ಈ ವಿಷಯವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಬಹಿರಂಗಪಡಿಸಿದರು.

ಭೂ ಕಬಳಿಕೆಯ ಕೃತ್ಯದ ಶೀಘ್ರ ವಿಚಾರಣೆಗೆ, ಕಬಳಿಕೆಯಾದ ಭೂಮಿಯ ಒಡೆತನ ಹಾಗೂ ಭೂ ಹಕ್ಕಿನ ಸ್ವಾಮ್ಯಕ್ಕೆ ಅಥವಾ ಕಾನೂನು ಸಮ್ಮತ ಸ್ವಾದೀನತೆಗೆ ಸಂಬಂಧಪಟ್ಟಂತೆ  ಕರ್ನಾಟಕ ಭೂ ಕಂದಯ ಅಧಿನಿಯಮ-1964 ರ ಪರಿಚ್ಛೇಧ 14 ( ಎ ) ನಂತೆ ಜಾರಿಗೆ ಬಂದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-2011 ರ ಅಡಿಯಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಿವಿಲ್ ನ್ಯಾಯಾಲಯಕ್ಕೆ ಇದ್ದ ಅಧಿಕಾರವನ್ನು ವರ್ಗಾವಣೆ ಮಾಡಿ ಈ ಪ್ರಕರಣಗಳ ಇತ್ಯರ್ಥ್ಯಕ್ಕಾಗಿಯೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ ಎಂದರು.

ಅದರಂತೆ, ಈ ಅಧಿನಿಯಮದಡಿ ಆರೋಪಿತರಾಗಿರುವ ರೈತರು ವಿಚಾರಣೆಗಾಗಿ ಬೆಂಗಳೂರಿಗೇ ಬರಬೇಕಾಗಿದೆ. ಪ್ರಸ್ತುತ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲಾ ರೈತರು ಬಾಧಿತರಾಗಿದ್ದರು.

ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಭೂ ಕಂದಾಯ ಕಾಯಿದೆ-1964 ರ ಪರಿಚ್ಛೇಧ 94 ( ಎ ) ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ರೈತರ ಹಿತದೃಷ್ಟಿಯನ್ನು ಕಾಯ್ದುಕೊಳ್ಳಲು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-2011 ಕ್ಕೆ ತಿದ್ದಪಡಿ ಮಾಡಿ, ಅಧ್ಯಾದೇಶ ಹೊರಡಿಸಲು ಸಂಪುಟ ಸರ್ವ ಸಮ್ಮತ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ