NEWSನಮ್ಮಜಿಲ್ಲೆ

ಬ್ಯಾಂಕ್‌ಗಳಲ್ಲಿ ಜನದಟ್ಟಣೆ ತಡೆಯಿರಿ

ಬ್ಯಾಂಕ್‌ಗಳ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್  

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಬ್ಯಾಂಕ್‌ಗಳಿಗೆ ಪಿಂಚಣಿದಾರರು ಹಾಗೂ ಇತರ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಜನದಟ್ಟಣೆ ಉಂಟಾಗದಂತೆ ಅಗತ್ಯ ಕ್ರಮವಹಿಸುವಂತೆ ವಿವಿಧ ಬ್ಯಾಂಕ್‌ಗಳ ಶಾಖೆ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಹಾಗೂ ವಿವಿಧ ಬ್ಯಾಂಕ್‌ಗಳ  ವ್ಯವಸ್ಥಾಪಕರೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಬ್ಯಾಂಕ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೆ ಪಾಲಿಸಬೇಕು ಎಂದು ನಿರ್ದೆಶನ ನೀಡಿದರು.

ಮಹಿಳೆಯರ ಹೆಸರಿನಲ್ಲಿರುವ ಜನ್‍ಧನ್ ಖಾತೆಗೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಹಣ ಜಮೆಯಾಗಲಿದ್ದು, ಏಪ್ರಿಲ್ 9 ರ ನಂತರ ಟೋಕನ್ ನೀಡಿ ಏಪ್ರಿಲ್ 13, 15 ಮತ್ತು 17 ರಂದು ಗ್ರಾಹಕರಿಗೆ ಬ್ಯಾಂಕ್ ಸೇವೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಗ್ರಾಮೀಣ ಪ್ರದೇಶದ ಗ್ರಾಹಕರ ಅನುಕೂಲಕ್ಕಾಗಿ ಬ್ಯಾಂಕಿಗ್ ಮಿತ್ರರು ಹೋಂ ಕ್ವಾರೆಂಟೈನ್‍ನಲ್ಲಿ ಇರುವ ಮನೆ ಹೊರತುಪಡಿಸಿ ಉಳಿದ ಮನೆಗಳಿಗೆ ಭೇಟಿ ನೀಡಿ ಬ್ಯಾಂಕ್ ಸೇವೆ ಒದಗಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಎಟಿಎಂಗಳಲ್ಲಿ ಹಣ ಇರಬೇಕು. ಎಟಿಎಂಗಳಲ್ಲಿ ಹಣ ಇಲ್ಲ ಎಂಬ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಸರ್ಕಾರ ಕೋವಿಡ್-19 ಹಿನ್ನೆಲೆ ದೇಶಾದ್ಯಂತ ಲಾಕ್‍ಡೌನ್ ಮಾಡಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರಿಗೆ ಹಲವು ವಿನಾಯ್ತಿ ಪ್ರಕಟಿಸಿದ್ದು ಅವುಗಳನ್ನು ಪಾಲಿಸಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‍ನ ಮುಖ್ಯ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ಮಾತನಾಡಿ, ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್‌ಗಳು ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ದಿನವು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿವೆ ಎಂದರು.

ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಯು ಸಭೆ ಸೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕುಗಳ ವಲಯ, ಕ್ಷೇತ್ರೀಯ ಕಾರ್ಯಾಲಯಗಳಿಗೆ ನೀಡಿರುವ ನಿರ್ದೇಶನದಂತೆ ಬ್ಯಾಂಕುಗಳ ಕಾರ್ಯ ನಿರ್ವಹಿಸಲಿವೆ ಎಂದರು.

ಭಾರತೀಯ ಸ್ಟೇಟ್ ಬ್ಯಾಂಕ್‌ನ ನಗರ ಮುಖ್ಯ ಶಾಖೆಯ ವ್ಯವಸ್ಥಾಪಕರಾದ ದಿನೇಶ್ ಪೈ, ಕೆನರಾ ಬ್ಯಾಂಕಿನ ವ್ಯವಸ್ಥಾಪಕರಾದ ಪ್ರಕಾಶ್ ಅವರು ಹಲವು ಮಾಹಿತಿ ನೀಡಿದರು. ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಇದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...