ದಾವಣಗೆರೆ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ ಬಂದಿರುವ ಮಾಹಿತಿಯನ್ನು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಘಟಕ ನೀಡಿದ್ದು, ಈ ಸೋಂಕಿತ ವ್ಯಕ್ತಿಯು ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮದ ಮನೆಯಲ್ಲಿ ಮಾ. 17 ರಿಂದ 23 ರವರೆಗೆ ಪ್ರತ್ಯೇಕ ಅವಲೋಕನದಲ್ಲಿ ಇದ್ದರು ಎಂದು ತಿಳಿಸಿದರು.
ಜಿಲ್ಲಾಡಳಿತದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಕೊಂಡ ಕ್ರಮ
- ಈಗಾಗಲೇ ಕೇಂದ್ರ /ರಾಜ್ಯ ಸರ್ಕಾರದ ಆದೇಶದಂತೆ ಏ.14 ರವರೆಗೆ ಲಾಕ್ ಡೌನ್ ಘೋಷಣೆ ಅಗಿರುತ್ತದೆ.
- ಜಿಲ್ಲಾಡಳಿತದಿಂದ ಲಾಕ್‍ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದೆ.
- ಈವರೆಗೆ ಜಿಲ್ಲೆಯಲ್ಲಿ ವಿದೇಶ ಪ್ರಯಾಣ ಹಿನ್ನಲೆ ಇರುವ ಎಲ್ಲಾ ವ್ಯಕ್ತಿಗಳನ್ನು ಸಂಪರ್ಕಿಸಿ ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ.
- ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಈಗಾಗಲೇ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶ ಮತ್ತು ಸುತ್ತೋಲೆಗಳ ಅನ್ವಯ ಮನೆಗಳಲ್ಲೆ ಇದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಸೂಚಿಸಿದೆ ಮತ್ತು ಕೋವಿಡ್-19 ನಿಯಂತ್ರಣ ತರುವಲ್ಲಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.