ನಮ್ಮರಾಜ್ಯ

ಮದ್ಯಪ್ರಿಯರಿಗೂ ಯಮನಾದ ಕೊರೊನಾ

ವೈನ್‌ ಸಿಗುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡರೆ ವ್ಯಸನಿಗಳು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯ ಸರಬರಾಜು ಮಾಡಿ ಎಂದು ಮದ್ಯಪ್ರಿಯರು ಸರ್ಕಾರಕ್ಕೆ ದುಂಬಾಲು ಬೀಳುತ್ತಿದ್ದು, ಇನ್ನೊಂದೆಡೆ ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ಹೇಳಲಾಗುತ್ತದೆ.

ಇಡೀ ವಿಶ್ವವನ್ನೇ ಕೊರೊನಾ ಎಂಬ ಹೆಮ್ಮಾರಿ ಕಾಡುತ್ತಿದ್ದರೆ ಇತ್ತ ನಮಗೆ ವೈನ್‌ಕೊಡಿ ಎಂದು ಮದ್ಯವ್ಯಸನಿಗಳು ಕುಡಿತವನ್ನು ತಾತ್ಕಾಲಿಕವಾಗಿ ತ್ಯೆಜಿಸಲಾರದೆ. ಹುಚ್ಚರಂತೆ ನಡೆದುಕೊಳ್ಳುತ್ತಿದ್ದಾರೆ. ಇತ್ತ ಕೊರೊನಾ ಭೀತಿ ದೇಶ ಮತ್ತು ರಾಜ್ಯವನ್ನು ಕಾಡುತ್ತಿದ್ದು, ಜನರು ಮನೆಯಿಂದ ಹೊರ ಬಾರದಂತೆ ಸರ್ಕಾರ ಕರ್ಫ್ಯೂ ವಿಧಿಸಿದೆ.

ಆದರೂ ಮದ್ಯವೆಸನಿಗಳು ನಮಗೆ ಮದ್ಯಬೇಕು ಎಂದು ಪತ್ರವನ್ನು ಬರೆದಿದ್ದಾರೆ. ಇನ್ನೊಂದೆಡೆ ಕೊರೊನಾ ವೈರಸ್‌ಗೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಿರುವುದು ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಮಂಗಳಮುಖಿಯರ ಕಣ್ಣೀರು

ಕೊರೊನಾ ಬಾಧೆಯಿಂದ ಮನೆಯಿಂದ ಹೊರಬಾರದಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಪಾಲಿಸುತ್ತಿದೆ. ಅದಕ್ಕೆ ರಾಜ್ಯದ ಜನತೆಯು ಬೆಂಬಲ ನೀಡಿದ್ದಾರೆ. ಈ ನಡುವೆ ಮಂಗಳಮುಖಿಯರು ನಮಗೆ ಆಹಾರ ಸಿಗುತ್ತಿಲ್ಲ. ನಮಗೆ ಹಣಬೇಡ ಅನ್ನಹಾಕಿ ಎಂದು ಸರ್ಕಾರದ ಮೊರೆ ಹೋಗುತ್ತಿದ್ದಾರೆ. ಇನ್ನು ಭಿಕ್ಷುಕರನ್ನು ಹಲವು ಸಂಘಸಂಸ್ಥೆಗಳು ಗುರುತಿಸಿ ಆಹಾರವನ್ನು ನೀಡುತ್ತಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ಸೌಲಭ್ಯವನ್ನು ಒದಗಿಸುತ್ತಿವೆ.

ಸರ್ಕಾರವು ಸಂಘಸಂಸ್ಥೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಹಲವು ಉದ್ಯಮಿಗಳು, ಸಿನಿಮಾ ತಾರೆಯರು, ನಾಗರಿಕರು ಸರ್ಕಾರಕ್ಕೆ ದೇಣಿಗೆಯನ್ನು ನೀಡುತ್ತಿದ್ದಾರೆ. ಆದರೆ ಒಂದಿಬ್ಬರು ರಾಜಕಾರಣಿಗಳನ್ನು ಬಿಟ್ಟರೆ ಉಳಿದ ರಾಜಕಾರಣಿಗಳು ಯಾವುದೇ ಸಹಾಯ ಮಾಡಲು ಮುಂದಾಗುತ್ತಿಲ್ಲ. ಇದು ರಾಜ್ಯದ ಜನತೆಯ ದೌರ್ಭಾಗ್ಯ. ಇನ್ನು ಮೇಲಾದರು ತಮ್ಮ ಕ್ಷೇತ್ರಗಳಲ್ಲಾದರೂ ನಿರ್ಗತಿಕ ಜನರಿಗೆ ನೆರವಾಗಬೇಕಿದೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ