NEWSಸಂಸ್ಕೃತಿ

ಮಾಧ್ಯಮ ಪ್ರತಿನಿಧಿಗಳಿಗೆ ಮುನ್ನೆಚ್ಚರಿಕೆ ಅತ್ಯಗತ್ಯ

ಪತ್ರಕರ್ತರಿಗೆ ಕೋವಿಡ್-19 ಜಾಗೃತಿಗಾಗಿ ಆರೋಗ್ಯ ತಪಾಸಣೆ l ಡಾ.ಮುನ್ಯಾಳ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕೋವಿಡ್-19 ಹರಡುವಿಕೆ ತಡೆಗಟ್ಟುವ ಕುರಿತು ಜನಜಾಗೃತಿ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿರುವ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿದಂತೆ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ “ವಾರ್ತಾಭವನ”ದಲ್ಲಿ ಶನಿವಾರ ಕೋವಿಡ್-19 ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ‌.ಎಸ್.ವಿ.ಮುನ್ಯಾಳ ಮಾತನಾಡಿ, ಕೋವಿಡ್-19 ಎಲ್ಲೆಡೆ ವ್ಯಾಪಕವಾಗಿ ಪಸರಿಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಅತೀ ಹೆಚ್ಚು ಜನರ ಸಂಪರ್ಕಕ್ಕೆ ಬರುವ ಮಾಧ್ಯಮ ಪ್ರತಿನಿಧಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಅರೋಗ್ಯ ತಪಾಸಣೆಗೆ ಒಳಪಡುವ ಅಗತ್ಯವಿದೆ ಎಂದರು.

ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸದಾ ನಿಕಟ ಸಂಪರ್ಕದಲ್ಲಿದ್ದು,  ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಮಾಧ್ಯಮ ಪ್ರತಿನಿಧಿಗಳ ಆರೋಗ್ಯವನ್ನು ಕೂಡ ತಪಾಸಣೆ ನಡೆಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೋವಿಡ್-೧೯ ಗೆ ಸಂಬಂಧಿಸಿದಂತೆ ತಪಾಸಣೆ ನಡೆಸಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ವಿವರಿಸಿದರು.

ಡಾ.ಜಯಾನಂದ ಧನವಂತ, ಡಾ.ಸುಜಾತಾ ನಿಶಾನದಾರ, ಸವಿತಾ ಕಿತ್ತೂರ ಹಾಗೂ ಮಾಧುರಿ ಕೆಂಗಾರಿ ನೇತೃತ್ವದ ತಂಡವು 92 ಕ್ಕೂ ಅಧಿಕ ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ತಪಾಸಣೆ ನಡೆಸಿದರು.

ತಪಾಸಣೆಗೆ ಒಳಗಾದ ಮಾಧ್ಯಮ ಪ್ರತಿನಿಧಿಗಳ ಪೈಕಿ ಯಾರಲ್ಲಿಯೂ ಕೋವಿಡ್-೧೯ ಗೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದಿರುವುದಿಲ್ಲ ಎಂದು ಡಾ.ಜಯಾನಂದ ತಿಳಿಸಿದ್ದಾರೆ.

ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಚೇರಮನ್ ಅಶೋಕ ಬಾದಾಮಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬೆಳಗಾವಿ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಡಿ.ಎನ್.ಮಿಸಾಳೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡುಮ್ಮಗೋಳ, ಡಾ.ಶಿವಾನಂದ ಗುಮ್ಮಗೋಳ, ಕರೊನಾ ಸ್ವಯಂಸೇವಕರಾದ ಬಸವರಾಜ ಕೋಳುಚೆ, ಅವಧೂತ ಮಾನಗೆ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ತಪಾಸಣೆ ಕೈಗೊಂಡ ವೈದ್ಯಕೀಯ ತಂಡಕ್ಕೆ ಮಾಧ್ಯಮ ಪ್ರತಿನಿಧಿಗಳು ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು