NEWSನಮ್ಮಜಿಲ್ಲೆವಿಜ್ಞಾನ

ಮಾಸ್ಕ್, ಸ್ಯಾನಿಟೈಸರ್ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದವರ ವಿರುದ್ಧ ಸಮರ

1,82 ಲಕ್ಷ ರೂ.ದಂಡ ವಸೂಲಿ l ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಮಹದೇವಸ್ವಾಮಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶದದ್ಯಾಂತ ಲಾಕ್‍ಡೌನ್ ಇರುವ ಸಂಬಂಧ ಮೈಸೂರು ಕಾನೂನೂ ಮಾಪನಶಾಸ್ತ್ರ ಇಲಾಖೆಯು ಜಿಲ್ಲಾದ್ಯಂತ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ನಿಗದಿತ ಬೆಲೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ 330 ಸ್ಟೋರ್‌ಗಳನ್ನು ತಪಾಸಣೆ ಮಾಡಿ, ಆಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಒಟ್ಟು 34 ಮೆಡಿಕಲ್ ಸ್ಟೋರ್‌ಗಳ ವಿರುದ್ಧ ಮೊಕದಮ್ಮೆ ಹೊಡಿ 1,82,000 ರೂ. ದಂಡ  ವಸೂಲಿ ಮಾಡಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಕೆ.ಎಂ.ಮಹದೇವಸ್ವಾಮಿ ತಿಳಿಸಿದ್ದಾರೆ.

ಪಡಿತದಾರರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುವ ವೇಳೆಯಲ್ಲಿ ಒಟ್ಟು 299 ನ್ಯಾಯಬೆಲೆ ಅಂಗಡಿಗಳ ಮೇಲೆ ತಪಾಸಣೆ ನಡೆಸಿ ತೂಕದಲ್ಲಿ ಕಡಿಮೆ ಪಡಿತರವನ್ನು ವಿತರಣೆ ಮಾಡಿದ 14 ನ್ಯಾಯಬೆಲೆ ಅಂಗಡಿಗಳ ಮೇಲೆ ಮೊಕದ್ದಮ್ಮೆ ಹೂಡಿ 58,000 ರೂ.ಗಳ ದಂಡ ವಸೂಲಿ ಮಾಡಲಾಗಿದೆ.

ಅಂಗಡಿ ಮಾಲೀಕರ ವಿರುದ್ಧ ಕ್ರಮಕ್ಕಾಗಿ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಗೆ ವರದಿಯನ್ನು ನೀಡಲಾಗಿದ್ದು, ಉಳಿದ ನ್ಯಾಯಬೆಲೆ ಅಂಗಡಿಗಳ ತಪಾಸಣೆ ನಡೆಸಿ 94 ನ್ಯಾಯಬೆಲೆ ಅಂಗಡಿಗಳ  ವಿರುದ್ದ ಮೊಕದ್ದಮೆ ದಾಖಲಾಸಿ 81,500 ರೂ.ಗಳ ದಂಡ ವಿಧಿಸಲಾಗಿದೆ ಎಂದರು.

ದಿನಸಿ ಪದಾರ್ಥ ಹಾಗೂ ಇತರೆ ದಿನನಿತ್ಯದ ವಸ್ತುಗಳನ್ನು ಪ್ರಾವಿಜನ್ ಸ್ಟೋರ್, ಮಾಲ್‍ಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ 85 ಅಂಗಡಿಗಳ ತಪಾಸಣೆ ನಡೆಸಿ 7 ಅಂಗಡಿಗಳ ವಿರುದ್ದ ಮೊಕದ್ದಮೆ ದಾಖಲಿಸಿ 38,500 ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಹೇಳಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಕಡಿಮೆ ತೂಕ ವಿತರಣೆ ಮಾಡುತ್ತಿದ್ದರೆ ಮತ್ತು ಪೂಟ್ಟಣ ರೂಪದಲ್ಲಿರುವ ಯಾವುದೇ ಆಹಾರ ಪದಾರ್ಥಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಿದರೆ ಕಾನೂನು ಮಾಪನಶಾಸ್ತ್ರ ನಿರೀಕ್ಷಕರಾದ ಜಿ.ಮಹಂತೇಶ್ 8884442580 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ