NEWSನಮ್ಮರಾಜ್ಯ

ಮೇ 2- ರಾಜ್ಯದಲ್ಲಿ 9 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 9 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 598 ಏರಿಕೆಯಾಗಿದೆ.  ಇವುಗಳಲ್ಲಿ 25ಜನರು ಮೃತಪಟ್ಟಿದ್ದು, 255 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.

ತುಮಕೂರು, ವಿಜಯಪುರದಲ್ಲಿ ತಲಾ ಎರಡು ಮತ್ತು ಬೀದರ್‌, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲ್‌ಕೋಟೆ, ಬೆಂಗಳೂರು ನಗರದಲ್ಲಿ ತಲಾ ಒಂದೊಂದು ಪ್ರಕರಣ  ಶನಿವಾರ ಮಧ್ಯಾಹ್ನ ಹೊರಬಿದ್ದ ಮಾಧ್ಯಮ ಬುಲಿಟಿನ್‌ನಲ್ಲಿ ವರದಿಯಾಗಿದೆ.

ಇನ್ನು ರಾಜ್ಯದಲ್ಲಿ ಒಟ್ಟಾರೆ 598 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 255 ಮಂದಿ ಗುಣಮುಖರಾಗಿದ್ದಾರೆ. ಇನ್ನು 320  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 25 ಮಂದಿ ಮೃತಪಟ್ಟಿದ್ದಾರೆ.  ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 37,336 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 37,336 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,223 ಮಂದಿ ಮೃತಪಟ್ಟಿದ್ದಾರೆ. 10,007 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 34,02,223  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,39,627 ಜನರು ಮೃತಪಟ್ಟಿದ್ದಾರೆ. 10,84,228 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ