ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 5 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 606 ಏರಿಕೆಯಾಗಿದೆ. ಇವುಗಳಲ್ಲಿ 25 ಜನರು ಮೃತಪಟ್ಟಿದ್ದು, 282 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.
ಕಲಬುರಗಿ ಮೂರು ಮತ್ತು ಬಾಗಲಕೋಟೆ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 606 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 282 ಮಂದಿ ಗುಣಮುಖರಾಗಿದ್ದಾರೆ. ಇನ್ನು 299 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 25 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.
ದೇಶದಲ್ಲಿ 39,980 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 39,980 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,323 ಮಂದಿ ಮೃತಪಟ್ಟಿದ್ದಾರೆ. 10,819 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 34,85,936 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,44,812 ಜನರು ಮೃತಪಟ್ಟಿದ್ದಾರೆ. 11,24,484 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.