ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 34 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ಇವುಗಳಲ್ಲಿ 25 ಜನರು ಮೃತಪಟ್ಟಿದ್ದು, 293 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ 635 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 293 ಮಂದಿ ಗುಣಮುಖರಾಗಿದ್ದಾರೆ. ಇನ್ನು 316 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 25 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಸಂಜೆವೇಳೆಗೆ 4 ಪ್ರಕರಣ ಪತ್ತೆಯಾಗಿವೆ. ಇನ್ನು ಕಲಬುರಗಿಯಲ್ಲಿ ಆರು ಮತ್ತು ಬಾಗಲಕೋಟೆಯಲ್ಲಿ ಮೂರು ಪ್ರಕರಗಳು ಪತ್ತೆಯಾಗಿವೆ.
ಈ ನಡುವೆ ಇಂದು ಸಂಜೆ ವೇಳಗೆ ದಾವಣಗೆರೆಯಲ್ಲಿ 21 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಹಿಂದೆ ಜಿಲ್ಲೆಯಲ್ಲಿ ಇದ್ದ 10 ಸೋಂಕಿತರ ಜತೆಗೆ 21 ಹೊಸದಾಗಿ ಸೇರುವ ಮೂಲಕ 31ಕ್ಕೆ ಏರಿಕೆಯಾಗಿದೆ. ಅದರಲ್ಲಿ ಇಬ್ಬರು ಮೃತಪಟ್ಟಿದ್ದು 29ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ 40,263 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 40,263 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,323 ಮಂದಿ ಮೃತಪಟ್ಟಿದ್ದಾರೆ. 10,819 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 34,85,936 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,44,812 ಜನರು ಮೃತಪಟ್ಟಿದ್ದಾರೆ. 11,24,484 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.