ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 37 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 651 ಏರಿಕೆಯಾಗಿದೆ.
ಇವುಗಳಲ್ಲಿ 27 ಜನರು ಮೃತಪಟ್ಟಿದ್ದು, 321 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ದಾವಣಗೆರೆಯಲ್ಲಿ22 , ಬೀದರ್ 7, ಕಲಬುರಗಿ ಮತ್ತು ಮಂಡ್ಯದಲ್ಲಿ ತಲಾ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಬೆಂಗಳೂರು, ಹಾವೇರಿ, ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 642 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 321 ಮಂದಿ ಗುಣಮುಖರಾಗಿದ್ದಾರೆ. ಇನ್ನು 303 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 27 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.
ದೇಶದಲ್ಲಿ 42,679 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 42,679 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,396 ಮಂದಿ ಮೃತಪಟ್ಟಿದ್ದಾರೆ. 11,782 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 35,81,871 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,48,555 ಜನರು ಮೃತಪಟ್ಟಿದ್ದಾರೆ. 11,59,500 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ..