NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯಲ್ಲಿ 35ಕ್ಕೇರಿದ ಸೋಂಕಿತರ ಸಂಖ್ಯೆ

ಬನ್ನೂರಿನಲ್ಲಿ ಭಾರಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಕ್ರಮ l ಪೊಲೀಸ್‌ ಬಂದೋಬಸ್ತ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಒಂದೇದಿನ 7ಮಂದಿಯಲ್ಲಿ ಪಾಸಿಟಿವ್‌ ಎಂದು ದೃಢಪಟ್ಟಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭಾರಿ ಕಟ್ಟೆಚ್ಚರ ವಹಿಸಲು ಸಿದ್ಧತೆ ಮಾಡಿಕೊಂಡಿದೆ.

ಅದರಲ್ಲೂ ತಿ.ನರಸೀಪುರ ತಾಲೂಕಿನ ಬನ್ನೂರಿನ ಮಸೀದಿಗೆ ಬಂದು ಹೋದ ಒಂಬತ್ತು ಜನರಲ್ಲಿ ದೃಢಪಟ್ಟಿದೆ. ಹೀಗಾಗಿ ಸುತ್ತಮುತ್ತಲಿನ ನಿವಾಸಿಗಳು ಗ್ರಾಮಸ್ಥರು ಭಾರಿ ಎಚ್ಚರಿಕೆ ವಹಸಿದಬೇಕಿದೆ.

ಇಂದು ದೃಢಪಟ್ಟಿರು ಸೋಂಕಿತರನ್ನು ಸೇರಿದಂತೆ ಮೈಸೂರು ಜಿಲ್ಲೆಯಲ್ಲಿ ಒಟ್ಟು 35 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಹೀಗಾಗಿ ಜಿಲ್ಲಾಡಿತವು ಹೆಚ್ಚಿನ ಕೇರ್‌ ತೆಗೆದುಕೊಳ್ಳುತ್ತಿದ್ದು ಜಿಲ್ಲೆಯ ಯಾವುದೇ ಗ್ರಾಮಸ್ಥರು ತಮ್ಮ ಪಕ್ಕದ ಗ್ರಾಮಗಳಿಗೂ ಹೋಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಸೋಂಕು ಪೀಡಿತರ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಹೆಚ್ಚಿನ ಅನಾಹುತವನ್ನು ತಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದಾರೆ.

ಇನ್ನು ಮೈಸೂರಿನಲ್ಲಿ ಶಾಸಕ ಎಸ್‌.ಎ. ರಾಮದಾಸ್‌ ಅವರು ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರಗಳನ್ನು ಹಂಚುತ್ತಿದ್ದಾರೆ. ಜತೆಗೆ ಸುಖಸುಮ್ಮನೆ ಯಾರು ಮನೆಯಿಂದ ಹೊರಬರಬೇಡಿ ಎಂದು ಸಲಹೆ ನೀಡುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಒಟ್ಟು 59 ಸೋಂಕಿತರು ಎಂದು ದೃಢಪಟ್ಟಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಭಾರಿ ಕಾಳಜಿ ವಹಿಸಲಾಗುತ್ತಿದೆ.

ಕೊರೊನಾ ಭೀತಿಯಿಂದ ಯಾವುದೇ ಕೆಲಸವಿಲ್ಲದೆ ನಿರ್ಗತಿಕರಾಗಿರುವವರಿಗೆ ಪಾಲಿಕೆ ಮತ್ತು ಆಯಾಯ ಕ್ಷೇತ್ರದ ಶಾಸಕರು ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ.

ಇನ್ನು ರಾಜ್ಯಾದ್ಯಂತ ಈವರೆಗೆ ಕೊರೊನಾಗೆ ನಾಲ್ವರು ಬಲಿಯಾಗಿದ್ದು 149ಕ್ಕೂ ಹೆಚ್ಚು ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ