NEWSನಮ್ಮಜಿಲ್ಲೆ

ಮೊಬೈಲ್ ಕ್ಲಿನಿಕ್‍ ಉಪಯೋಗ ಪಡೆಯಿರಿ

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮನೆ ಮನೆಗೆ ವೈದ್ಯಕೀಯ ಸೇವೆ ತಲುಪಿಸಲು ನೂತನ ಕೋವಿಡ್ -19 ಮೊಬೈಲ್ ಕ್ಲಿನಿಕ್ ವ್ಯವಸ್ಥೆಯನ್ನು ಹೊಂದಿರುವ ಮೊಬೈಲ್ ವ್ಯಾನ್‍ಗಳ ಸೇವೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯನ್ನು ಕೊರೊನಾ ಮುಕ್ತ ಮಾಡಲು ಜಿಲ್ಲಾಡಳಿತ ಹಾಗೂ ವೈದ್ಯಕೀಯ ಸಿಬ್ಬಂದಿ ಉತ್ತಮ ಕಾರ್ಯವನ್ನು ಮಾಡುತ್ತಿದ್ದಾರೆ. ಅವರಿಗೆ ನನ್ನ ಹಾಗೂ ಸರ್ಕಾರದ ಪರವಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಗುವುದು. ನಂಜನಗೂಡಿನಲ್ಲಿಯೂ ಸಹ ಈ ಮೊಬೈಲ್ ಕ್ಲಿನಿಕ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.

ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೇಯರ್ ತಸ್ನೀಂ, ಉಪಮೇಯರ್ ಶ್ರೀಧರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಇತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ