NEWSಸಂಸ್ಕೃತಿ

ರಂಜಾನ್ ಆಚರಣೆ; ಸರ್ಕಾರದ ನಿರ್ದೇಶನ ಪಾಲಿಸಿ

ಮುಸ್ಲಿಂ ಧಾರ್ಮಿಕ ಮುಖಂಡರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಜಿಲ್ಲೆಯಲ್ಲಿ ಮೇ 3 ರ ತನಕ ಲಾಕ್‍ಡೌನ್ ಜಾರಿಯಲ್ಲಿದ್ದು, ವಕ್ಫ್ ಮಂಡಳಿ ನೀಡಿರುವ ಮಾರ್ಗ ಸೂಚಿಗಳನ್ವಯ ರಂಜಾನ್ ಮಾಸವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್  ಮುಸ್ಲಿಂ ಧಾರ್ಮಿಕ ಮುಖಂಡರಿಗೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಂಜಾನ್ ಆಚರಣೆ ಸಂಬಂಧ ಪಾಲಿಸಬೇಕಾದ ನಿಯಮಗಳಿಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಂಜಾನ್ ಮಾಸದಲ್ಲಿ ಮುಸ್ಲಿಂ ಧರ್ಮೀಯರು ಬಡವರಿಗೆ ದಾನ-ಧರ್ಮ ಮಾಡುವ ಪರಿಪಾಠವಿದ್ದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ನಿಗದಿಪಡಿಸಿದ ದಿನಗಳಲ್ಲಿ ನಿಗದಿತ ಸಮಯದಲ್ಲಿ ಬಡವರಿಗೆ ದಾನ-ಧರ್ಮ ಮಾಡಬಹುದು ಎಂದು ತಿಳಿಸಿದರು.

ಮಸೀದಿಗಳಲ್ಲಿ ಕಡ್ಡಾಯವಾಗಿ ಗುಂಪು ಸೇರಿ ಪ್ರಾರ್ಥನೆ ಮಾಡುವುದನ್ನು ಈಗಾಗಲೇ ನಿಷೇಧಿಸಲಾಗಿದ್ದು, ಇದನ್ನು ಮುಸ್ಲಿಂ ಧರ್ಮೀಯರು ತಪ್ಪದೆ ಪಾಲಿಸಬೇಕು. ಮೇ 3ರ ತನಕ ಸರ್ಕಾರವು ಹೊರಡಿಸಿರುವ ಲಾಕ್‍ಡೌನ್ ನಿಯಮಗಳನ್ನು ತಪ್ಪದೆ ಪಾಲಿಸುವಂತೆ ಮುಸ್ಲಿಂ ಮುಖಂಡರಿಗೆ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮಾತನಾಡಿ ರಂಜಾನ್ ಮಾಸದಲ್ಲಿ ಮುಸ್ಲಿಂ ಧರ್ಮೀಯರು ಕಡ್ಡಾಯವಾಗಿ ಮನೆಯಲ್ಲಿಯೇ ಪ್ರಾರ್ಥನೆ ಮಾಡುವುದು, ಮನೆಗಳ ಮೇಲ್ಛಾವಣಿಗಳ ಮೇಲೆ ಅಕ್ಕ-ಪಕ್ಕದ ಮನೆಯರನ್ನು ಸೇರಿಸಿಕೊಂಡು ಗುಂಪಾಗಿ ನಮಾಝ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಇದನ್ನು ತಪ್ಪದೆ ಪಾಲಿಸಬೇಕೆಂದು ತಿಳಿಸಿದರು.  ಡಿವೈಎಸ್‍ಪಿ ದಿನೇಶ್ ಕುಮಾರ್ ಇತರರು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್