ಗುಂಡ್ಲುಪೇಟೆ: ಕೇರಳ ಹಾಗೂ ತಮಿಳುನಾಡಿಗೆ ಉತ್ಪನ್ನಗಳ ಸಾಗಾಟ ವೇಳೆ ತೊಂದರೆಯಾಗದಂತೆ ಈಗಾಗಲೇ ಸೂಚಿಸಲಾಗಿದೆ. ಒಂದು ವೇಳೆ ಸಮಸ್ಯೆಯಾದರೆ ತಕ್ಷಣವೇ ಗಮನಕ್ಕೆ ತನ್ನಿ ಎಂದು ರೈತರು ಹಾಗೂ ವರ್ತಕರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಬುಧವಾರ ಮುಂಜಾನೆ ಅಧಿಕಾರಿಗಳ ಜೊತೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ರೈತರ ಬೆಳೆಗೆ ಉತ್ತಮ ದರ ಸಿಗುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬೇಕಾಬಿಟ್ಟಿ ದರಗಳ ಮಾರಾಟಕ್ಕೆ ಕಡಿವಾಣ ಬೀಳಬೇಕು. ರೈತರಿಗೆ ಒಳ್ಳೇ ದರ ಸಿಗಬೇಕು. ಆ ದರದ ಮೇಲೆ ಮಾರಾಟದ ದರದ ಮೇಲೂ ನಿಗಾ ವಹಿಸಬೇಕು ಎಂದರು.
ರೈತರಿಗೆ ನಷ್ಟವಾಗಿ ದಲ್ಲಾಳಿಗಳಿಗೆ ಮಾತ್ರ ಲಾಭವಾಗುವಂತೆ ಮಾಡುವುದು ಸರಿಯಲ್ಲ. ಇಂಥದ್ದಕ್ಕೆ ಎಪಿಎಂಸಿಯಿಂದ ಕಡಿವಾಣ ಬೀಳಬೇಕು. ಈ ಬಗ್ಗೆ ಕೂಡಲೇ ಉಪ ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರ್ ಮೂಲಕ ಆದೇಶ ಹೊರಡಿಸಲಾಗುವುದು. ಹಾಗೇ ಎಪಿಎಂಸಿಗೆ ಕೋಲ್ಡ್ ಸ್ಟೋರೇಜ್ ಅನ್ನು ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಮಾರುಕಟ್ಟೆಯಲ್ಲಿ ತರಕಾರಿ ಉತ್ಪನ್ನಗಳ ಮಾರಾಟ ಸ್ಥಿತಿಗತಿಗಳ ಬಗ್ಗೆ ಪ್ರತಿ ಮಳಿಗೆಗೆ ಭೇಟಿ ಕೊಡುವುದರ ಮೂಲಕ ಕೊರೊನಾ ಬಾಧಿಸುವುದಕ್ಕೆ ಮುಂಚೆ ಹಾಗೂ ಹಾಲಿ ವಸ್ತುಸ್ಥಿತಿ ಹೇಗಿದೆ ಎಂದು ವಿಚಾರಿಸಿಕೊಂಡರು.
ರೈತರು ಮತ್ತು ವರ್ತಕರ ಬಗೆಗಿನ ನಿಮ್ಮ ಕಾಳಜಿ ಮೆಚ್ಚುವಂತದ್ದು ನಿಮ್ಮ ಕಾಳಜಿ ಸಫಲವಾದರೆ ಅದು ಸಾರ್ಥಕ ವಾದಂತೆ
Super