NEWSನಮ್ಮರಾಜ್ಯಸಂಸ್ಕೃತಿ

ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಅರ್ಚಕರಿಗೆ ನೆರವು

ಧಾರ್ಮಿಕ ದತ್ತಿ ದೇವಸ್ಥಾನಗಳ ಅರ್ಚಕರಿಗೆ ಆಹಾರ ಕಿಟ್ ವಿತರಣೆಗೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ರಾಜ್ಯದಲ್ಲಿ ಕೊರೊನಾ ವೈರಸ್ (ಕೋವಿಡ್-19) ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಗೊಳಿಸಿದ್ದು, ಎಲ್ಲಾ ದೇವಾಲಯಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಿದೆ.  ಹೀಗಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ‘ಸಿ’ ವರ್ಗದ ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿಗೆ ಆಹಾರ ಕಿಟ್ ವಿತರಣೆಗೆ ಚಿತ್ರದುರ್ಗ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ನಿರ್ದೇಶನದಂತೆ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ “ಎ” ವರ್ಗದ ದೇವಾಲಯಗಳ ವತಿಯಿಂದ  ಜಿಲ್ಲೆಯಲ್ಲಿನ “ಸಿ” ವರ್ಗದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ಇತರೆ ಸಿಬ್ಬಂದಿಗಳಿಗಾಗಿ ಆಹಾರದ ಕಿಟ್‍ಗಳನ್ನು ಪೂರೈಸಲು ಸಂಬಂಧಪಟ್ಟ ತಾಲೂಕು ಆಡಳಿತಕ್ಕೆ ಗುರುವಾರ ಒಪ್ಪಿಸಲಾಯಿತು.

ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 299 “ಸಿ” ವರ್ಗದ ಮುಜರಾಯಿ ದೇವಸ್ಥಾನಗಳಿದ್ದು, ಈ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಇತರೆ ಸಿಬ್ಬಂದಿಗಳಿಗಾಗಿ “ಎ” ವರ್ಗದ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನ, ಹಿರಿಯೂರು ತಾಲ್ಲೂಕು ವದ್ದೀಕೆರೆಯ ಕಾಲಭೈರವೇಶ್ವರಸ್ವಾಮಿ ದೇವಸ್ಥಾನ ಹಾಗೂ ಹೊಸದುರ್ಗ ತಾಲ್ಲೂಕಿನ ಗವಿರಂಗಾಪುರ ಗ್ರಾಮದ ಗವಿರಂಗನಾಥಸ್ವಾಮಿ ದೇವಸ್ಥಾನದ ವತಿಯಿಂದ ಚಿತ್ರದುರ್ಗ ತಾಲ್ಲೂಕಿಗೆ-115, ಚಳ್ಳಕೆರೆ-40, ಹಿರಿಯೂರು-51, ಮೊಳಕಾಲ್ಮೂರು-29, ಹೊಳಲ್ಕೆರೆ-52 ಹಾಗೂ ಹೊಸದುಗ ತಾಲ್ಲೂಕಿಗೆ-142 ಸೇರಿದಂತೆ ಪಡಿತರವಿರುವ ಒಟ್ಟು 429 ಆಹಾರದ ಕಿಟ್‍ಗಳನ್ನು ವಿತರಿಸಲಾಗಿದೆ.

ಅರ್ಚಕರಿಗೆ ಹಾಗೂ ಇತರೆ ಸಿಬ್ಬಂದಿಗೆ ನೀಡಲು ಉದ್ದೇಶಿಸಲಾಗಿರುವ ಪ್ರತಿ ಆಹಾರ ಕಿಟ್ 5 ಕೆ.ಜಿ. ಅಕ್ಕಿ, 02 ಕೆ.ಜಿ. ತೊಗರಿ ಬೆಳೆ, 01 ಕೆ.ಜಿ. ಬೆಲ್ಲ, 01 ಲೀ. ಅಡುಗೆ ಎಣ್ಣೆ, 01 ಕೆ.ಜಿ. ಸಕ್ಕರೆ ಹಾಗೂ 01 ಕೆ.ಜಿ. ಉಪ್ಪು ಒಳಗೊಂಡಿದೆ.

ಮುಜರಾಯಿ ವ್ಯಾಪ್ತಿಯ “ಸಿ” ವರ್ಗದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ಇತರೆ ಸಿಬ್ಬಂದಿಗಳಿಗೆ “ಎ” ವರ್ಗದ ದೇವಸ್ಥಾನಗಳ ವತಿಯಿಂದ ಆಹಾರದ ಕಿಟ್‍ಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಗುರುವಾರ ಆಯಾ ತಾಲ್ಲೂಕಿನ ತಹಶೀಲ್ದಾರ್‍ಗಳ ಮೂಲಕ ತಾಲ್ಲೂಕು ಆಡಳಿತಕ್ಕೆ ಆಹಾರದ ಕಿಟ್‍ಗಳನ್ನು ಒಪ್ಪಿಸಲಾಗಿದೆ. ಶುಕ್ರವಾರದಿಂದ ಸಂಬಂಧಪಟ್ಟ ದೇವಸ್ಥಾನಗಳ ಅರ್ಚಕರಿಗೆ ಹಾಗೂ ಇತರೆ ಸಿಬ್ಬಂದಿಗೆ ಆಹಾರದ ಕಿಟ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ತಹಸೀಲ್ದಾರ್ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು