ಜೈಪುರ: ಆಲ್ಕೋಹಾಲ್‌ಅನ್ನು ಕೈಗೆ ಉಜ್ಜುವುದರಿಂದ ಕೊರೊನಾ ವೈರಸ್ ಸತ್ತುಹೋಗುತ್ತದೆ ಎಂದಾದರೆ ಅದನ್ನೇ ಕುಡಿದರೆ ಗಂಟಲಲ್ಲೇ ನಾಶವಾಗಬಹುದಲ್ಲವೇ ಎಂದು ರಾಜಸ್ಥಾನದ ಸಾಂಗೋದ್ನ ಕಾಂಗ್ರೆಸ್ ಶಾಸಕ ಭರತ್ ಸಿಂಗ್ ವಾದಮಾಡಿದ್ದಾರೆ.
ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೇಡಿಕೆಯಿಟ್ಟಿರುವುದು ವಿವಾದಕ್ಕೀಡಾಗಿರುವ ಬೆನ್ನಲ್ಲೇ ಸಿಂಗ್ ಈ ವಾದ ಮುಂದಿಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗೆ ಬೇಡಿಕೆಯಿಟ್ಟಿರುವುದು ವಿವಾದಕ್ಕೀಡಾಗಿರುವ ಬೆನ್ನಲ್ಲೇ ಸಿಂಗ್ ಈ ವಾದ ಮುಂದಿಟ್ಟಿದ್ದಾರೆ.
ಈ ಕುರಿತು ಮಖ್ಯಮಂತ್ರಿಗಳಿಗೆ ಪತ್ರವನ್ನೂ ಬರೆದಿದ್ದು, ಲಾಕ್‌ಡೌನ್ ವೇಳೆ ಮದ್ಯ ಮಾರಾಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಮತಿ ನೀಡದ ಹಿನ್ನೆಲೆಯಲ್ಲಿ ವೈನ್‌ಶಾಪ್‌ಗಳು ಮುಚ್ಚಿರುವುದರಿಂದ ಸರ್ಕಾರದ ಆದಾಯದ ಬೆನ್ನುಮೂಳೆ ಮುರಿದಂತಾಗಿದೆ ಎಂದು ತಿಳಿಸಿದ್ದಾರೆ.
ಮದ್ಯದಂಗಡಿಗಳ ತೆರೆಯುವಿಕೆಗೆ ಅವಕಾಶ ನೀಡದೇ ಇರುವುದರಿಂದ ಅಕ್ರಮ ಮದ್ಯ ತಯಾರಿಕೆ, ಮಾರಾಟಕ್ಕೆ ಅವಕಾಶ ನೀಡದಂತಾಗುತ್ತದೆ. ಅಕ್ರಮ ಮದ್ಯ ಜನರನ್ನು ಸಾಯಿಸುವುದು ಮಾತ್ರವಲ್ಲದೆ ಸರ್ಕಾರದ ಬೊಕ್ಕಸಕ್ಕೂ ನಷ್ಟ ಉಂಟುಮಾಡುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಇಬ್ಬರು ಭಾರತ್‌ಪುರದಲ್ಲಿ ಅಕ್ರಮ ಮದ್ಯ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಕೆಲ ಮಾದ್ಯಮಗಳಲ್ಲಿ ಪ್ರಕಟವಾಗಿರುವ ವರದಿಯನ್ನೂ ಅವರು ಹಾಕಿಸಿದ್ದಾರೆ.
ಮದ್ಯದ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. 2020-21ನೇ ಹಣಕಾಸು ವರ್ಷದಲ್ಲಿ ಮದ್ಯ ಮಾರಾಟದಿಂದ ಹೆಚ್ಚಿನ ಆದಾಯ ಸಂಗ್ರಹಿಸಲು ಗುರಿ ನಿಗದಿಪಡಿಸಲಾಗಿದೆ. ಆದರೆ ಲಾಕ್‌ಡೌನ್‌ನಿಂದಾಗಿ ಇದು ಸಾಧ್ಯವಾಗದು. ಹೀಗಾಗಿ ರಾಜ್ಯ ಸರ್ಕಾರ ಮದ್ಯದಂಗಡಿಗಳ ತೆರವಿಗೆ ಅನುಮತಿ ನೀಡಬೇಕು. ಇದರಿಂದ ಮದ್ಯಪ್ರಿಯರಿಗೆ ಮದ್ಯ ಸಿಗುವುದರ ಜತೆಗೆ ಸರ್ಕಾರಕ್ಕೂ ಆದಾಯ ದೊರೆಯಲಿದೆ ಎಂದು ವಿವರಿಸಿದ್ದಾರೆ.