NEWSನಮ್ಮರಾಜ್ಯ

ವ್ಯಕ್ತಿಗತ ಸಾಮಾಜಿಕ ಅಂತರದ ಮುಂಜಾಗ್ರತೆಯೇ ಮದ್ದು

ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ l ಸಚಿವ ಸಿಸಿ.ಪಾಟೀಲ ನಿರ್ದೇಶನ

ವಿಜಯಪಥ ಸಮಗ್ರ ಸುದ್ದಿ

ಗದಗ: ಕೊರೊನಾ(ಕೋವಿಡ್ 19) ರೋಗಾಣು ತೀವ್ರವಾಗಿ ಹರಡುತ್ತಿದ್ದು ಇದರ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವದು ಅತೀ ಅವಶ್ಯಕ. ಸ್ಥ ಗಣಿ ಮತ್ತು ಭೂವಿಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಸಲಹೆ ನೀಡಿದರು.

ಗದಗ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಟಾಸ್ಕಫೋರ್ಸ್‌ ಅಧಿಕಾರಿಗಳ ಸಭೆಯನ್ನು ಜರುಗಿಸಿ ಮಾತನಾಡಿದರು.

ಸ್ಥಳೀಯಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಪೊಲೀಸ್‌ ಇಲಾಖೆ ಸಹಯೋಗದಿಂದ ಜನರು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದರು.

 

ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಇದುವರೆಗೆ ಜಿಲ್ಲಾಡಳಿತ, ಪೊಲೀಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಉತ್ತಮ ಕಾರ್ಯನಿರ್ವಹಿಸಿವೆ. ಕೊರೊನಾ ರೋಗಾಣು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆ, ಸ್ಥಳೀಯಸಂಸ್ಥೆಗಳ ಅಧಿಕಾರಿ ಸಿಬ್ಬಂದಿ, ವೈದ್ಯಾಧಿಕಾರಿಳಳಿಗೆ ಉತ್ತಮ ಗುಣಮಟ್ಟದ ಮಾಸ್ಕ್‌, ಸ್ಯಾನಿಟೈಸರ್‌ ಇತರೆ ಸಾಮಗ್ರಿಗಳನ್ನು ಒದಗಿಸಲು ಅಗತ್ಯದ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ರಾಷ್ಟ್ರಾದ್ಯಂತ ಏ.14ರವರೆಗೂ ಯಾರೂ ಕೂಡಾ ಮನೆಬಿಟ್ಟು ಹೊರಬರದಂತೆ ಕ್ರಮ ಸೇರಿದಂತೆ ಪ್ರತಿಬಂಧ ಸ್ಥಿತಿ ಜಾರಿಯಲ್ಲಿದೆ. ಜಿಲ್ಲೆಯಲ್ಲಿ ಅನಗತ್ಯವಾಗಿ ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ಧ ತಕ್ಷಣ ಕಾನೂನಿನ ಕ್ರಮ ಕೈಗೊಳ್ಳಬೇಕು. ಪೊಲೀಸ್ ಸಿಬ್ಬಂದಿ ಕೊರತೆಯಾಗುತ್ತಿದ್ದಲ್ಲಿ  ಕೆ.ಎಸ್.ಆರ್.ಪಿ. ತುಕುಡಿಗಳನ್ನು ನಿಯೋಜಿಸಲು ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ಇದು ಸಾರ್ವಜನಿಕ ಆರೋಗ್ಯ ರಕ್ಷಣೆ ವಿಷಯವಾಗಿದ್ದು ಅಗತ್ಯದ ಕ್ರಮಕ್ಕೆ ಹೆಚ್ಚಿನ ಮುತುವರ್ಜಿ ವಹಿಸಲು, ಮನೆಯಲ್ಲಿ ಪ್ರತ್ಯೇಕವಾಗಿ ಇರುವವರು ಹೊರಗೆ ಬರದಂತೆ ಸದಾ ನಿಗಾವಹಿಸಲು ಹಾಗೂ ಈ ಕಾರ್ಯದಲ್ಲಿ ಯಾವುದೇ ಲೋಪ ಉಂಟಾಗದಂತೆ ಕ್ರಮವಹಿಸಲು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲೆಯಲ್ಲಿ ಕೊರೊನಾ ವೈರಸ ತಡೆಟ್ಟಲು ಕೈಗೊಂಡಂತಹ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಿಸಲಾಗಿದೆ. ಮಲ್ಲಸಮುದ್ರದ ಮೊರಾರ್ಜಿ ವಸತಿ ಶಾಲೆಯಲ್ಲಿ ಮನೆಯಲ್ಲಿಯೇ ನಿಗಾದಲ್ಲಿರುವವರು ನಿಯಮ ಉಲ್ಲಂಘಿಸಿದವರಿಗಾಗಿ 150 ಹಾಸಿಗೆಗಳ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದ್ದು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಆಯುಷ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು ಈ ನೂರು ಹಾಸಿಗೆಗಳಿಗೆ ಆಕ್ಸಿಜನ್ ಪೈಪನ್ನು ಅಳವಡಿಸಲಾಗಿದೆ ಎಂದರು.

ಗದಗ-ಬೆಟಗೇರಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಜನಸಾಂಧ್ರತೆ ನಿಯಂತ್ರಿಸುವ ನಿಟ್ಟಿನಲ್ಲಿ ಮನೆಮನೆಗೆ ತರಕಾರಿ ಪೂರೈಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಕಿರಾಣಿ ಸಾಮಗ್ರಿಗಳ ಖರೀದಿಗಾಗಿ ಆಪ್ ಒಂದನ್ನು ಪರಿಚಯಿಸಲಾಗಿದ್ದು ಇದರ ಮೂಲಕ ನಗರದ ಸಾರ್ವಜನಿಕರಿಗೆ ದಿನಸಿ ಪದಾರ್ಥಗಳನ್ನು ಮನೆಗೆ ಪೂರೈಸಲು ಕ್ರಮ ಜರುಗಿಸಲಾಗುವದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹನಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಎಂ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ ಬಸರೀಗಡದ, ಜಿಮ್ಸ ನಿರ್ದೇಶಕ ಪಿ.ಎಸ್.ಭೂಸರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ