NEWSನಮ್ಮರಾಜ್ಯಸಿನಿಪಥ

ಸರಳವಾಗಿ ನೆರವೇರಿತು ನಿಖಿಲ್ ಕುಮಾರಸ್ವಾಮಿ‌-ರೇವತಿ ವಿವಾಹ

ಮನೆಯಿಂದಲೇ ವಧು ವರರ ಆಶೀರ್ವದಿಸಿ ಎಂದು ಮನವಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್ನಿಂದಾಗಿ ಲಾಕ್ ಡೌನ್ ಉಂಟಾಗಿರುವುದರಿಂದ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಅವರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಇಂದು ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತು.

ಮಾಜಿ ಸಚಿವ ಎಂ. ಕೃಷ್ಣಪ್ಪ ಅವರ ಮೊಮ್ಮಗಳು ರೇವತಿಯನ್ನು ನಿಖಿಲ್ ಕುಮಾರಸ್ವಾಮಿ ಇಂದು (ಏ.17) ರಾಮನಗರದ ಅವರ ತೋಟದ ಮನೆಯಲ್ಲಿ ಎರಡೂ ಕುಟುಂಬಗಳ ಸುಮಾರು 50 ಜನರ ಸಮ್ಮುಖದಲ್ಲಿ  ವಿವಾಹವಾದರು. ಇದಕ್ಕಾಗಿ ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಮನೆಯಲ್ಲಿ ಚಪ್ಪರದ ಪೂಜೆ ಅರಿಶಿನ ಶಾಸ್ತ್ರ ನೆರವೇರಿತು. ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಮಗನಿಗೆ ಅರಿಶಿನದ ನೀರು ಹಾಕಿ ಆಶೀರ್ವದಿಸಿದರು.

ಅದ್ದೂರಿಯಾಗಿ ನೆರವೇರಿಸಲು ಆಯೋಜಿಸಿದ್ದ ನನ್ನ ಮಗನ ವಿವಾಹವನ್ನು ಸರಳವಾಗಿ 50-60 ಜನ ಆಪ್ತ ಬಂಧುಗಳ ಸಮ್ಮುಖದಲ್ಲಿ ಮಾಡಿದ್ದೇವೆ. ಕೊರೊನಾ ವೈರಸ್ ಲಾಕ್ ಡೌನ್‌ನಿಂದಾಗಿ ಸರ್ಕಾರ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ಪಾಲಿಸುವುದು ನಮಗೆ ಸದ್ಯಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಅಭಿಮಾನಿಗಳು, ಬೆಂಬಲಿಗರು ಯಾರೂ ಬೇಸರ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಭೀತಿಯಿಂದ ಅಂದುಕೊಂಡಂತೆ ವಿವಾಹ ನೆರವೇರಿಸಲು ಆಗಲಿಲ್ಲ ಎಂದು ಬೇಸರಗೊಂಡಿರುವ   ಕುಮಾರಸ್ವಾಮಿಯವರು ತಮ್ಮ ಅಭಿಮಾನಿಗಳನ್ನು ಆಹ್ವಾನಿಸಲಾಗದಿದ್ದಕ್ಕೆ ಕ್ಷಮೆ ಕೋರಿದ್ದಾರೆ.

ಕೊರೊನಾ ವೈರಸ್ ಸಮಸ್ಯೆಯೆಲ್ಲ ಮುಗಿದ ಮೇಲೆ ಎಲ್ಲರನ್ನೂ ಆಹ್ವಾನಿಸಿ ದೊಡ್ಡ ಔತಣಕೂಟ ಏರ್ಪಡಿಸುತ್ತೇವೆ. ನಾವು ಬೇರೆಯವರಿಗೆ ಮಾದರಿಯಾಗಬೇಕು. ಈ ಹಿನ್ನೆಲೆಯಲ್ಲಿ ನಿಯಮವನ್ನು ಸರಿಯಾಗಿ ಪಾಲಿಸುವುದು ಅನಿವಾರ್ಯವಾಗಿದೆ. ಇದಕ್ಕೆ ನಿಮ್ಮೆಲ್ಲರ ಬೆಂಬಲವು ಇದೆ ಎಂದು ನಂಬಿ ಈ ಕಾರ್ಯ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಒಂದು ಖುಷಿಯ ವಿಚಾರವೆಂದರೆ ರಾಮನಗರ ಜಿಲ್ಲೆ ಕೊರೊನಾ ವೈರಸ್‌ಗೆ ಹಸಿರು ವಲಯದಲ್ಲಿ ಬಂದಿರುವುದು. ಬೆಂಗಳೂರಿನ ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಿರುವುದರಿಂದ ರಾಮನಗರ ತೋಟದ ಮನೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದರೆ ಬೇರೆಯವರಿಗೆ ಮಾದರಿಯಾಗುವುದು ಕಷ್ಟ. ಹೀಗಾಗಿ ಯಾರನ್ನು ಮದುವೆಗೆ ಕರೆಯಲಾಗಲಿಲ್ಲ ಆದ್ದರಿಂದ ನಮ್ಮ ಎಲ್ಲಾ ಅಭಿಮಾನಿಗಳು, ಬೆಂಬಲಿಗರು ಮನೆಯಿಂದಲೇ ತಮ್ಮ ಮಗನಿಗೆ ಹರಸಬೇಕೆಂದು ವಿಡಿಯೋ ಸಂದೇಶದ ಮೂಲಕ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ