NEWSನಮ್ಮಜಿಲ್ಲೆ

ಸಿಎಂ ವಿಪಕ್ಷ ನಾಯಕ, ಎಲ್ಲಾ ಶಾಸಕರ ಒಂದು ವರ್ಷದ ಶೇ.30 ವೇತನ ಭತ್ಯೆ ಕಡಿತ

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉಭಯ ಸದನಗಳ – ಮೇಲ್ಮನೆ ಮತ್ತು ಕೆಳಮನೆಯ – ಎಲ್ಲಾ ಶಾಸಕರ ಶೇ. 30 ರಷ್ಟು ವೇತನ ಹಾಗೂ ಭತ್ಯೆಗಳನ್ನು ಪ್ರಸಕ್ತ ಸಾಲಿನ ಏಪ್ರಿಲ್‍ನಿಂದ ಮುಂದಿನ ಮಾರ್ಚ್‍ವರೆಗೆ ಕಡಿತಗೊಳಿಸಿ ಮುಖ್ಯಮಂತ್ರಿಯವರ ಕೋವಿಡ್ ಪರಿಹಾರ ನಿಧಿಗೆ ವರ್ಗಾಯಿಸಲು ರಾಜ್ಯ ಸಚಿವ ಸಂಪುಟ ಇಲ್ಲಿ ಇಂದು ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ  ತಿಳಿಸಿದ್ದಾರೆ.

ವಿಧಾನ ಸೌಧಧ ಸಮ್ಮೇಳನ ಸಭಾಂಗಣದಲ್ಲಿ ಇಂದು ಎರಡನೇ ಬಾರಿಗೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ, ಉಪ ಸಭಾಪತಿ, ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು, ಪ್ರತಿಪಕ್ಷ ನಾಯಕರು, ರಾಜ್ಯ ಸರ್ಕಾರದ ಹಾಗೂ ಪ್ರತಿಪಕ್ಷದ ಮುಖ್ಯ ಸಚೇತಕರೂ ಒಳಗೊಂಡಂತೆ ಎಲ್ಲರೂ ಇದಕ್ಕೆ ಸಾಮೂಹಿಕವಾಗಿ ಒಪ್ಪಿಗೆ ನೀಡಿದ್ದಾರೆ.

ರಾಜ್ಯವು ಒಳಗೊಂಡಂತೆ ರಾಷ್ಟ್ರದಲ್ಲೆಡೆ ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ರಿಂದ ಕರ್ನಾಟಕದಲ್ಲಿ ಉದ್ಭವಿಸುತ್ತಿರುವ ಸಂಕಷ್ಟದ ಪರಿಸ್ಥಿಯನ್ನು ಸಮರ್ಥವಾಗಿ ನಿಭಾಯಿಸಲು ಆರ್ಥಿಕ ಸಂಪನ್ಮೂಲವನ್ನು ಕ್ರೋಢೀಕರಿಸಲು ಪೂರಕವಾಗುವಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ವಿಧಾನ ಮಂಡದವರ ಸಂಬಳ, ನಿವೃತ್ತಿ ವೇತನ ಮತ್ತು ಭತ್ಯೆಗಳು ಅಧಿನಿಯಮ-1956, ಕರ್ನಾಟಕ ವಿಧಾನ ಸಭಾ ಸದಸ್ಯರು ಮತ್ತು ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಸಂಬಳ ಹಾಗೂ ಭತ್ಯೆಗಳನ್ನು ಹಾಗೂ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ-1956 ಗೆ ತಿದ್ದುಪಡಿ ತರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಸರ್ವಪಕ್ಷಗಳ ಮುಖಂಡರ ಸರ್ವ ಸಮ್ಮತಿಯ ಪಡೆದು ಈ ನಿರ್ಣಯವನ್ನು ಕರ್ನಾಟಕ ಸರ್ಕಾರ ( ಕಾರ್ಯ ಕಲಾಪಗಳ ನಿರ್ವಹಣೆ ) ನಿಯಮಗಳು 1977 ರ ಮೊದಲನೇ ಅಧಿಸೂಚಿಯಲ್ಲಿ ಅಗತ್ಯಪಡಿಸಿರುವಂತೆ ಆಧ್ಯಾದೇಶದ ರೂಪದಲ್ಲಿ ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ