NEWSಆರೋಗ್ಯನಮ್ಮಜಿಲ್ಲೆ

ಸೀಲ್‍ಡೌನ್ ಏರಿಯಾಗಳಲ್ಲಿ ಆಂಬುಲೆನ್ಸ್ ಬಳಸಿ ಜ್ವರ ತಪಾಸಣೆ

ದಿನಸಿ ಸಾಮಗ್ರಿ ಕಿಟ್ ವಿತರಿಸಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕೋವಿಡ್-19 ಸೋಂಕು ಮುಕ್ತ ರಾಜ್ಯವನ್ನಾಗಿಸಲು ರಾಜ್ಯದ ಡೇಂಜರ್ ಜೋನ್ ಹಾಗೂ ಕಂಟೈನ್ಮೆಂಟ್ ಏರಿಯಾಗಳಲ್ಲಿ 108 ಆ್ಯಂಬುಲೆನ್ಸ್ ಬಳಸಿಕೊಂಡು, ಫೀವರ್ ಕ್ಲಿನಿಕ್‍ಗಳಲ್ಲಿ ಜ್ವರ ತಪಾಸಣೆ ಮಾಡಲು ಯೋಜಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

 ಮೊಳಕಾಲ್ಮೂರು ಪಟ್ಟಣದ ಪಟ್ಟಣ ಪಂಚಾಯತ್ ಕಚೇರಿ ಆವರಣದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರಿಗೆ ನಿತ್ಯ ಬಳಕೆಯ ದಿನಸಿ ಸಾಮಗ್ರಿ ಕಿಟ್ ವಿತರಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಲಾಕ್‍ಡೌನ್ ಅವಧಿಯನ್ನು ವಿಸ್ತರಣೆ ಮಾಡಬೇಕೋ, ಸಡಿಲಿಕೆ ಮಾಡಬೇಕೋ ಎನ್ನುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕೇಂದ್ರ ಸರ್ಕಾರದ ನಿರ್ಧಾರವನ್ನು ಗಮನಿಸಿದ ಬಳಿಕವೇ ಮೇ. 03 ರ ಬಳಿಕ ರಾಜ್ಯದಲ್ಲಿ ಲಾಕ್‍ಡೌನ್ ವಿಸ್ತರಣೆ ಅಥವಾ ಸಡಿಲಿಕೆ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರದ ನಿರ್ದೇಶನದಂತೆ ಮೇ 3 ರವರೆಗೆ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಸದ್ಯದ ಸನ್ನಿವೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ.  ಸೀಲ್‍ಡೌನ್ ಮಾಡಿರುವ ಹಾಗೂ ಕಂಟೈನ್ಮೆಂಟ್ ಪ್ರದೇಶವೆಂದು ಗುರುತಿಸಲಾಗಿರುವ ಕಡೆಗಳಲ್ಲಿ ಎಲ್ಲರಿಗೂ ಜ್ವರ ತಪಾಸಣೆ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ 108 ಆಂಬುಲೆನ್ಸ್ ಬಳಕೆ ಮಾಡಲಾಗುವುದು ಎಂದು ತಿಳಿಸಿದರು.

ಆಶಾ ಕಾರ್ಯಕರ್ತೆಯರು ಅಥವಾ ವೈದ್ಯರ ಮೇಲೆ ಹಲ್ಲೆ ಮಾಡಿದಲ್ಲಿ ಅಂತಹವರಿಗೆ 2 ಲಕ್ಷ ರೂ. ದಂಡ, 2 ವರ್ಷ ಜೈಲು ಶಿಕ್ಷೆ ನೀಡಬಹುದಾದ ವಿಶೇಷ ಕಾಯ್ದೆ ರೂಪಿಸಲಾಗಿದೆ.  ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯರು ಮತ್ತು ಆರೊಗ್ಯ ಇಲಾಖೆ ಸಿಬ್ಬಂದಿ ಸೇವಾ ವೈಖರಿ ಶ್ಲಾಘನೀಯವಾಗಿದೆ. ಜೀವದ ಹಂಗು ತೊರೆದು ಶ್ರಮ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯ ಸಿಬ್ಬಂದಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದರು.

ಮೊಳಕಾಲ್ಮೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕಾಂತರಾಜ್, ತಹಸಿಲ್ದಾರ್ ಬಸವರಾಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?