NEWSನಮ್ಮರಾಜ್ಯ

ಸುದೈವದಿಂದ ಬೆಳಗಾವಿ ಕೊರೊನಾದಿಂದ ಹೊರಗಿದೆ

ಉದಾಸೀನ ತೋರದೆ ಮತ್ತಷ್ಟು ಎಚ್ಚರ ವಹಿಸಿ l ಡಿಸಿಎಂ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ದಿನಸಿ, ತರಕಾರಿ ಮತ್ತಿತರ ಅಗತ್ಯ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕು. ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಪಡಿತರ ಧಾನ್ಯ ಪೂರೈಸುವ ಬಗ್ಗೆ ಪರಿಶೀಲಿಸಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಿನ್ನೆ ಸಂಜೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸುದೈವದಿಂದ ಜಿಲ್ಲೆಯಲ್ಲಿ ಇದುವರೆಗೆ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಆದರೆ ಪಾಸಿಟಿವ್ ಬಂದಿಲ್ಲ ಎಂದು ಉದಾಸೀನತೆ ತೋರದೇ ತೀವ್ರ ಮುನ್ನೆಚ್ಚರಿಕೆ ವಹಿಸಬೇಕು. ನಗರ ಪ್ರದೇಶಗಳಲ್ಲಿ ಪಡಿತರ ಧಾನ್ಯವನ್ನು ಮನೆ ಮನೆ ಬಾಗಿಲಿಗೆ ತಲುಪಿಸುವ ಸಾಧ್ಯತೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ನಗರ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳ ನೆರವಿನಿಂದ ಪಡಿತರವನ್ನು ಮನೆ ಬಾಗಿಲಿಗೆ ಕಳಿಸುವ ಬಗ್ಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಈ ರೀತಿ ಕಳುಹಿಸುವ ಬಗ್ಗೆ ಪರಿಶೀಲಿಸುವಂತೆ ಸಲಹೆ ನೀಡಿದರು.

ವೆಂಟಿಲೇಟರ್ಸ್, ಸ್ಯಾನಿಟೈಸರ್, ಮಾಸ್ಕ್, ಪಿಪಿಇ ಮತ್ತಿತರ ವೈದ್ಯಕೀಯ ಸಾಮಗ್ರಿಗಳ ಲಭ್ಯತೆ ಹಾಗೂ ಸರ್ಕಾರಕ್ಕೆ ಕಳಿಸಲಾಗಿರುವ ಪ್ರಸ್ತಾವನೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ವೈದ್ಯಕೀಯ ಸಿಬ್ಬಂದಿ ಹಾಗೂ ಅವಶ್ಯಕ ಸೇವೆಯಲ್ಲಿ ತೊಡಗಿಕೊಂಡಿರುವ ಆಧಿಕಾರಿ ಹಾಗೂ ಸಿಬ್ಬಂದಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಕೊರತೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಅದೇ ರೀತಿ ಮರ್ಕಜ್ ಧಾರ್ಮಿಕ ಸಭೆಯಿಂದ ಜಿಲ್ಲೆಗೆ ಹಿಂದಿರುಗಿದ ಜನರನ್ನು ಗುರುತಿಸಿ ವೈದ್ಯಕೀಯ ತಪಾಸಣೆ ನಡೆಸಬೇಕು. ಹೀಗೆ ಆಗಮಿಸಿರುವ ಜನರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಸೋಂಕು ಹರಡದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದರು.

ಕೋವಿಡ್-19 ಹರಡುವಿಕೆ ತಡೆಗಟ್ಟುವಿಕೆ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದಾದರೂ ನಿರ್ಧಾರ ಕೈಗೊಳ್ಳಬೇಕಿದ್ದರೆ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈಗಾಗಲೇ ಜಿಲ್ಲೆಗೆ ಪ್ರವೇಶಿಸಿರುವ ವಲಸೆ ಕಾರ್ಮಿಕರಿಗೆ ವಸತಿ ಮತ್ತು ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

200 ಹಾಸಿಗೆಗಳ ಕೋವಿಡ್ ಆಸ್ಪತ್ರೆ

ಪ್ರತ್ಯೇಕ 200 ಹಾಸಿಗೆಗಳ ಬಿಮ್ಸ್ ಅಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆ ಎಂದು ಅಧಿಸೂಚಿಸಲಾಗಿದೆ. ಸಾಮಾನ್ಯ ಜನರು ಅಥವಾ ರೋಗಿಗಳಿಗೆ ತೊಂದರೆಯಾಗದಂತೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಹಾಪಕಾಮ್ಸ್ ಮತ್ತು ‌ಕೆಲ ಖಾಸಗಿ ವಾಹನಗಳ ಮೂಲಕ ಬಡಾವಣೆಗಳಿಗೆ ತರಕಾರಿ ಕಳಿಸಲಾಗುತ್ತಿದೆ ಎಂದರು.

ಇದೇ ರೀತಿ ನಗರಪ್ರದೇಶಗಳಲ್ಲಿ ಮನೆ ಮನೆಗೆ ಪಡಿತರ ಧಾನ್ಯ ವಿತರಣೆಗೆ ಕ್ರಮವಹಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ