NEWSನಮ್ಮರಾಜ್ಯ

ಸೋಂಕು ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ

ಅಧಿಕಾರಿಗಳಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸೂಚನೆ  

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಮುಂದಿನ ಎರಡು ವಾರ ಮಹತ್ವದ ಅವಧಿಯಾಗಿರುವುದರಿಂದ ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿತುವ ಸಿದ್ಧತೆಗಳು ಕುರಿತು ಶನಿವಾರ) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ  ಮಾತನಾಡಿದರು.

ಅಂತಾರಾಜ್ಯ ಜನರ ಸಂಚಾರದ ಮೇಲೆ ನಿಗಾ ವಹಿಸಲು ರಾಜ್ಯ ಪ್ರವೇಶಿಸುವ ರಸ್ತೆಗಳಲ್ಲಿ ಚುನಾವಣಾ ಚೆಕ್ ಪೋಸ್ಟ್ ಮಾದರಿಯಲ್ಲಿ ನಿಗಾ ಮತ್ತು ಆರೋಗ್ಯ ತಪಾಸಣಾ ತಂಡ ನಿಯೋಜಿಸಲು ಸಲಹೆ ನೀಡಿದರು.

ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು. ನೆರೆಯ ರಾಜ್ಯದ ಜನಸಂಚಾರ ಸಂಪೂರ್ಣ ಬಂದ್ ಮಾಡುವ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.

ಸಾಮೂಹಿಕ ಪ್ರಾರ್ಥನೆ ಬದಲು ತಮ್ಮ ತಮ್ಮ ಮನೆಗಳಲ್ಲಿಯೇ ಜನರು ಪ್ರಾರ್ಥನೆ ಕೈಗೊಳ್ಳಲು ಮನವೊಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಸಚಿವರು ಮಾಹಿತಿಯನ್ನು ಪಡೆದುಕೊಂಡರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ