
ಬೆಂ.ಗ್ರಾ.: ತೋಟಗಾರಿಕೆ ಇಲಾಖೆ ವತಿಯಿಂದ 10 ತಿಂಗಳ ತೋಟಗಾರಿಕೆ ತರಬೇತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿಯನ್ನು https://horticulturedir.karnataka.gov.in ವೆಬ್ ಸೈಟ್ ಮೂಲಕ ಅಥವಾ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿ ಮತ್ತು ತಾಲ್ಲೂಕು ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಎಪ್ರಿಲ್ 01 ರೊಳಗೆ ಹತ್ತಿರದ ತಾಲ್ಲೂಕು ತೋಟಗಾರಿಕೆ ಇಲಾಖೆ ಕಛೇರಿಗೆ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಿರ್ಣರಾಗಿರಬೇಕು. ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಇದರ ಬಗ್ಗೆ ಪಹಣಿಯು ನೀಡುವುದು ಕಡ್ಡಾಯವಾಗಿರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಕನಿಷ್ಟ 18 ವರ್ಷ ಗರಿಷ್ಟ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ 65 ವರ್ಷ ಹಾಗೂ ಇತರರಿಗೆ 18 ರಿಂದ 30 ವಯೋಮಿತಿ ಹೊಂದಿರಬೇಕು.
ಅಭ್ಯರ್ಥಿಗಳನ್ನು ಎಪ್ರಿಲ್ 8 ರಂದು ನಡೆಯುವ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ತರಬೇತಿಯು ಮೇ 5 ರ ಪ್ರಾರಂಭವಾಗುತ್ತದೆ. ತರಬೇತಿಯ ಪ್ರವೇಶ ಪತ್ರವನ್ನು ಎಪ್ರಿಲ್ 16 ರಂದು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಅಥವಾ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯ ಕೆಲಸದ ವೇಳೆಯಲ್ಲಿ ಪಡೆಯಬಹುದು ಅಥವಾ ದೂ.ಸಂ – 080-22860815 /9071280906 ಗೆ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.