NEWSನಮ್ಮರಾಜ್ಯರಾಜಕೀಯ

ಬಡಜನರ ಹಸಿವು ನೀಗಿಸಲು ವರ್ಷಕ್ಕೆ 10,092 ಕೋಟಿ ರೂ. ವೆಚ್ಚ ಭರಿಸಲು ಸರ್ಕಾರ ಸಿದ್ದ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ರೂ. ವೆಚ್ಚವಾಗಲಿದೆ. ಬಡಜನರ ಹಸಿವು ನೀಗಿಸಲು ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್.ಸಿ.ಸಿ.ಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಭಾರತೀಯ ಆಹಾರ ಮಂಡಳಿ(ಎಫ್.ಸಿ.ಐ) ನಿಂದ 34 ರೂ. ಅಕ್ಕಿ , 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಎನ್.ಸಿ.ಸಿ.ಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್‌ ಮಾಡಿದ್ದಾರೆ.

ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿಯಷ್ಟು ಪ್ರಮಾಣದ ಅಕ್ಕಿಯನ್ನು ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂ.ಎಸ್.ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ, ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಜಾರಿಗೊಳಿಸಲಿದೆ ಎಂದು ಹೇಳಿದ್ದಾರೆ.

ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಹೀಗಾಗಿ ಅವರು ಒಕ್ಕೂಟ ಧರ್ಮ ಪಾಲನೆ ಮಾಡುವ ಮೂಲಕ ರಾಜ್ಯಗಳಿಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ