NEWSಆರೋಗ್ಯನಮ್ಮರಾಜ್ಯ

ವಿಧಾನಸೌಧದ ಎದುರು10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ಯೋಗವು ಯಾವುದೇ ಜಾತಿ, ಧರ್ಮ, ಮತ ಪಂಥಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ ಎನ್ನುವ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ. ದೇಹ ಮತ್ತು ಮನಸ್ಸಿನ ಸಂಯೋಗವೇ ಈ ಯೋಗ.

ಭಾರತೀಯ ಯೋಗ ಪರಂಪರೆ ಇಂದು ವಿಶ್ವವ್ಯಾಪಿಯಾಗಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ಈ ಯೋಗ ರೂಪುಗೊಂಡಿದೆ. ಎಲ್ಲದ ಸಮ್ಮಿಳಿತವಾಗಿ ಇಂದು ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ವಿಧಾನಸೌಧದ ಎದುರು ನಡೆದ ಕಾರ್ಯಕ್ರಮದಲ್ಲಿ ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ