NEWSನಮ್ಮಜಿಲ್ಲೆ

119 ಮಂದಿ ಪಾದರಾಯನಪುರ ಗಲಭೆಕೋರರು ವಶ

ಸಂಪೂರ್ಣ ನಿಯಂತ್ರಣದಲ್ಲಿ ಪಾದರಾಯನಪುರ l ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾದರಾಯನಪುರ ಘಟನೆಗೆ ಸಂಬಂಧಿಸಿ ಇದುವರೆಗೆ 119 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ ಅವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ  ತಿಳಿಸಿದರು.

ನಗರದ ಅರಮನೆ ಮೈದಾನದಲ್ಲಿ ದಿನಸಿ ಪದಾರ್ಥಗಳನ್ನು ಸಿದ್ಧಪಡಿಸಿ ವಲಸೆ ಕಾರ್ಮಿಕರಿಗೆ ತಲುಪಿಸುವ ಹಂಗರ್ ಸೇವಿಯರ್ಸ್ ಸ್ವಯಂ ಸೇವಕರ ವಾಹನ ಪಡೆಗೆ ಇಂದು ಚಾಲನೆ ನೀಡಿದ ನಂತರ ಮಾಧ್ಯಮದವರ ಜತೆಯಲ್ಲಿ ಮಾತನಾಡಿದರು.

ಕೊರೊನಾ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್ ಡೌನ್ ಹಾಗೂ ಸಿಲ್ ಡೌನ್ ಉಲ್ಲಂಘಿಸಿ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ನಗರದ ಪಾದರಾಯನಪುರದಲ್ಲಿ ಗಲಭೆ ಸೃಷ್ಠಿಸಲು ಕಾರಣರಾದ ಈ ಎಲ್ಲಾ ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.

ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಕ್ರಮ ಜರುಗಿಸುವಿರಾ ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ ಹಾಗೂ ಸಾಂಕ್ರಾಮಿಕ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಅಂತೆಯೇ, ಎಲ್ಲಾ ಹಾಟ್-ಸ್ಪಾಟ್ ಜಿಲ್ಲೆಗಳಲ್ಲೂ ಕೋವಿಡ್-19 ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ ಎಂದು    ಸ್ಪಷ್ಟಪಡಿಸಿದರು.

2 Comments

  • ಪುಂಡರಿಗೆ ಸರಿಯಾದ ಪಾಠ ಕಲಿಸಲೇಬೇಕು

  • ನಮ್ಮನ್ನು ಆರೋಗ್ಯದಿಂದಿಡಲು ಹಗಲಿರುಳೆನ್ನದೆ ಶ್ರಮಿಸುತ್ತಿರುವವರ ಮೇಲೆ ಹಲ್ಲೆ ಮಾಡುವವರಿಗೆ ಇದು ಒಂದು ಪಾಠವಾಗಬೇಕು ಇದರಿಂದ ಮತ್ತೊಬ್ಬರು ಪಾಠ ಕಲಿಯಬೇಕು ಆರೀತಿ ಶಿಕ್ಷೆಗೆ ಗುರಿಪಡಿಸಿ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ