ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “11ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವ ಸಂಬಂಧದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಗ ದಿನಾಚರಣೆಯನ್ನು “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುವುದು. ಆ ದಿನ ಬೆಳಗ್ಗೆ 7 ಗಂಟೆಯಿಂದ 7:45 ಗಂಟೆಯ ವರೆಗೆ ಯೋಗಾಭ್ಯಾಸ ನಡೆಯಲಿದೆ ಎಂದು ವಿವರಿಸಿದರು.
ಇನ್ನು ಶಿಷ್ಟಾಚಾರದಂತೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರನ್ನು ಒಳಗೊಂಡ ಯೋಗಾಭ್ಯಾಸ ನಡೆಯಲಿದೆ.
ಜೊತೆಗೆ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಆಯೋಜಕರಿಗೆ ಸೂಚಿಸಿದರು.
ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಶುಹಬುದ್ದೀನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಲಕ್ಕಾ ಕೃಷ್ಣಾ ರೆಡ್ಡಿ, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...