ಹನೂರು: ಮಹಿಳೆಯರಿಗೆ ರೇಷನ್ ನೀಡುತ್ತೇವೆಂದು ಎಂದು ಹೇಳಿ 1.27 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರು ಸಹ ಇನ್ನು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆ ಆಗಿಲ್ಲ ಎಂದು ಪಟ್ಟಣದಲ್ಲಿ ಜಿಲ್ಲಾಧಿಕಾರಿಗಳಿಗೆ ಮುಖಂಡ ನಾಗರಾಜು ದೂರು ನೀಡಿದರು.
ಮಂಗಳವಾರ ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರ ಸಮ್ಮುಖದಲ್ಲಿ ಸಾರ್ವಜನಿಕರ ದೂರು ಸ್ವೀಕಾರ ಕಾರ್ಯಕ್ರಮ ಹಮ್ಮಿಕೂಳ್ಳಲಾಗುತ್ತು.
ಚಾಮರಾಜನಗರ ಜಿಲ್ಲೆಯ ವಿವಿಧ ತಾಲೂಕಿನ ಮಹಿಳೆಯರಿಗೆ ರೇಷನ್ ಕಿಟ್ ನೀಡುತ್ತೇವೆ ಎಂದು ಹೇಳಿ ಚಂಗವಾಡಿ ಗ್ರಾಮದ ಕುಮಾರ್ ಎಂಬಾತ ಹಣವನ್ನು ಸಂಗ್ರಹಿಸಿ ರೇಷನ್ ನೀಡದೆ 1.27ಕೋಟಿ ರೂ ವಂಚನೆ ಮಾಡಿದ್ದ. ಈ ಪ್ರಕರಣ ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಒಂದು ವರ್ಷ ಕಳೆದರೂ ಸಹ ಇನ್ನೂ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಈ ವೇಳೆ ಆರ್ಟಿಐ ಕಾರ್ಯಕರ್ತ ಅಪ್ಪಾಜಿ ಮಾಹಿತಿ ಹಕ್ಕಿನಡಿ ಆಹಾರ ಇಲಾಖೆಗೆ ಕೆಲ ಮಾಹಿತಿ ಕೇಳಿ ಒಂದು ವರ್ಷ ಕಳೆದರೂ ಸಹ ಮಾಹಿತಿ ನೀಡೆದ ನಿರ್ಲಕ್ಷ್ಯವಹಿಸಿದ್ದಾರೆ ಹಾಗೂ ಲೊಕ್ಕನಹಳ್ಳಿ ಗ್ರಾಮದ ನಾಡಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ವಿಪರೀತವಾಗಿದೆ ಎಂದು ದೂರಿದರು.
ಗ್ರಾಮಾಂತರ ಭಾಗದಲ್ಲಿ ಆಕ್ರಮ ಮದ್ಯ ಮಾರಾಟ- ಕ್ರಮಕ್ಕೆ ಒತ್ತಾಯ: ಹನೂರು ತಾಲೂಕಿನ ಗ್ರಾಮಾಂತರ ಭಾಗದ ವಿವಿಧ ಅಂಗಡಿಗಳಲ್ಲಿ ಎಗ್ಗಿಲ್ಲದೆ ಆಕ್ರಮ ಮದ್ಯ ಮಾರಾಟವಾಗುತ್ತಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಕಂಡು ಕಾಣದಂತೆ ಇದ್ದಾರೆ ಎಂದು ಕೆವಿಎನ್ ದೊಡ್ಡಿ ಗ್ರಾಮದ ರೈತ ಮುಖಂಡ ಸಿದ್ದಪ್ಪ ದೂರಿದರು.
ಈ ವೇಳೆ ಜಿಲ್ಲಾಧಿಕಾರಿಗಳು ಕೂಡಲೇ ಅಬಕಾರಿ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮುಖಾಂತರ ಮಾಹಿತಿ ನೀಡಿ ಕೂಡಲೇ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮದ ವೇಳೆ ಕ್ರೀಡಾಂಗಣದ ಪ್ರವೇಶ ದ್ವಾರ ಅವ್ಯವಸ್ಥೆ ದೂರು : ಹನೂರು ಪಟ್ಟಣದ ಮಲೆಮಹೇಶ್ವರ ಕ್ರೀಡಾಂಗಣದಲ್ಲಿ ನಡೆದಂತಹ ಸಿಎಂ ಕಾರ್ಯಕ್ರಮದ ವೇಳೆ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಅಧಿಕಾರಿಗಳು ತರಾತುರಿಯಲ್ಲಿ ನಿರ್ಮಿಸಿದಂತಹ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದ್ದು ಹಾಕಿದ್ದಂತಹ ಜಲ್ಲಿಕಲ್ಲು ಮೇಲಕ್ಕೆ ಬಂದು ಅವ್ಯವಸ್ಥೆಯಾಗಿ ಮಾರ್ಪಟ್ಟಿದ್ದೆ ಹಾಗೂ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಗಮನ ಹರಿಸುವಂತೆ ಹನೂರು ತಾಲೂಕು ಕ್ರಿಕೆಟ್ ಕ್ಲಬ್ ಅಧ್ಯಕ್ಷ ಅಭಿಲಾಷ್ ದೂರು ನೀಡಿ ಒತ್ತಾಯಿಸಿದರು.
ಇನ್ನು ಕೊಳ್ಳೇಗಾಲದಿಂದ ಹನೂರು ಪಟ್ಟಣದವರೆಗೆ ನಡೆಯುತ್ತಿರುವಂತಹ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬ ಆಗುತ್ತಿರುವ ಹಿನ್ನೆಲೆ ತಾಲೂಕು ಕೇಂದ್ರ ಸ್ಥಾನದಲ್ಲಿ ಸಂಪೂರ್ಣ ಧೂಳು ಮಯವಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಮೌಖಿಕವಾಗಿ ದೂರು ನೀಡಿದರು.
ಈ ವೇಳೆ ತಹಸೀಲ್ದಾರ್ ಆನಂದಯ್ಯ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮೂರ್ತಿ ಸೇರಿದಂತೆ ಕಂದಾಯ ಇಲಾಖಾಧಿಕಾರಿಗಳಾದ ಉಮಾ, ನಾಗೇಂದ್ರ,ಕುಮಾರಸ್ವಾಮಿ, ಮಹದೇವಸ್ವಾಮಿ, ಶೇಷಣ್ಣ ಸೇರಿದಂತೆ ಇನ್ನಿತರರು ಇದ್ದರು.