NEWSಕೃಷಿನಮ್ಮರಾಜ್ಯ

KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ನಿರಂತವಾಗಿ ಕೊಡಗು ಮತ್ತು ಹಾಸನ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ (KRS) 1.30 ಲಕ್ಷ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.

ಅಲ್ಲದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದಲೂ ಭಾರೀ ಪ್ರಮಾಣದ ನೀರನ್ನು ನದಿ ಬಿಡಲಾಗಿದೆ. ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್‌ ಒಳ ಹರಿವು ಹಾಗೂ ಹೊರಹರಿವಿನಲ್ಲಿ ನಿರಂತವಾಗಿ ಏರಿಕೆಯಾಗುತ್ತಿದೆ.

ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದ್ದು, 124.84 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಸದ್ಯ 124.80 ಅಡಿ ನೀರು ಸಂಗ್ರಹವಾಗಿದೆ. 1,20,000 ಕ್ಯೂಸೆಕ್ ಒಳ ಹರಿವು ಇದ್ದು 1,30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 48.643 ಟಿಎಂಸಿ ನೀರು ಸಂಗ್ರಹಗೊಂಡಿದೆ.

ಜುಲೈ 29ರ ಸೋಮವಾರ ಬಾಗೀನ ಅರ್ಪಣೆ: ಎರಡು ವರ್ಷದ ಬಳಿಕ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29 ಸೋಮವಾರ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ.

ಕ್ಯುಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?: ಕ್ಯುಸೆಕ್ ಎಂಬುದು Cubic feet per Second ಅಂದರೆ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯುಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯುಸೆಕ್ ನೀರು 24 ಗಂಟೆ ನಿರಂತರವಾಗಿ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯುಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಆಗುತ್ತದೆ.

35.87 ಅಡಿ ಆಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಅಂದರೆ 1ಸಾವಿರ ಸುತ್ತಳತೆಯಲ್ಲಿ ಸಂಗ್ರಹಿಸಿದರೆ ಅದು ಒಂದು ಟಿಎಂಸಿ ನೀರು ಆಗುತ್ತದೆ. ಇನ್ನು ಸರಳವಾಗಿ ಹೇಳಬೇಕು ಅಂದರೆ 2300 ಎಕರೆ ಪ್ರದೇಶದಲ್ಲಿ ಒಂದು ಅಡಿ ಎತ್ತರದ ವರೆಗೆ ನಿಂತಿರುವ ನೀರನ್ನು ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?