ಜೈಪುರ: ಉದಯೋನ್ಮುಖ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2025) ಈ ಬಾರಿ ಹೊಸ ಯುವಕರ ಆರ್ಭಟವೇ ಜೋರಾಗಿದೆ. ಆದ್ರೆ 14 ವರ್ಷದ ಬಾಲಕ ತಾನು ಪ್ರವೇಶಿಸಿದ ಚೊಚ್ಚಲ ಐಪಿಎಲ್ ಆವತ್ತಿಯಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜರ ಹುಬ್ಬೇರಿಸುವಂತೆ ಮಾಡಿದ್ದಾನೆ.
ಇನ್ನು ಐಪಿಎಲ್ ಅಂದ್ರೆ ಸಿಕ್ಸರ್, ಬೌಂಡರಿಗಳ ಅಬ್ಬರ ಇದ್ದೇ ಇರುತ್ತೇ. ಕೆಲವೊಮ್ಮೆ ಬ್ಯಾಟ್ಸ್ಮೆನ್ಗಳು ಕಡಿಮೆ ಎಸೆತಗಳಲ್ಲಿ ಭಾರೀ ರನ್ಗಳಿಸಿ ಪಂದ್ಯದ ಗತಿಯನ್ನೇ ಬದಲಿಸುತ್ತಾರೆ. ಅಂತಾರಾಷ್ಟ್ರೀಯ ಮಟ್ಟದ ದಿಗ್ಗಜರೇ ಹೆಚ್ಚಾಗಿರುವ ಈ ಅಖಾಡದಲ್ಲಿ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ ಭರ್ಜರಿಯಾಗಿ ಮಿಂಚುತ್ತಿದ್ದಾರೆ.
ತನ್ನ ಚೊಚ್ಚಲ ಪಂದ್ಯದಲ್ಲೇ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್ ವೃತ್ತಿ ಬದುಕು ಶುರು ಮಾಡಿದ ವೈಭವ್ ಸೂರ್ಯವಂಶಿ 3ನೇ ಪಂದ್ಯದಲ್ಲೇ ಸ್ಫೋಟಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ 17 ಎಸೆತಗಳಲ್ಲಿ 6 ಸಿಕ್ಸರ್, 3 ಬೌಂಡರಿ ಬಾರಿಸುವ ಮೂಲಕ ಸ್ಫೋಟಕ ಅರ್ಧಶತಕ ಸಿಡಿಸಿದ್ದರು. ಮುಂದಿನ 18 ಎಸೆತಗಳಲ್ಲಿ ಫಿಫ್ಟಿ ಬಾರಿಸುವ ಮೂಲಕ ಶತಕ ಪೂರೈಸಿದ್ದಾರೆ. ಒಟ್ಟು ತಾನು ಎದುರಿಸಿದ 38 ಎಸೆತಗಳಲ್ಲಿ 101 ರನ್ (11 ಸಿಕ್ಸರ್, 7 ಬೌಂಡರಿ) ಸಿಡಿಸಿ ಔಟಾದರು.
2ನೇ ಆಟಗಾರನೆಂಬ ದಾಖಲೆ: ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಖ್ಯಾತಿ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಇದೀಗ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೇಗದ ಶತಕ ಬಾರಿಸಿದ 2ನೇ ಆಟಗಾರ ಜತೆಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉಳಿದಂತೆ ಯೂಸೂಫ್ ಪಠಾಣ್ (37 ಎಸೆತ), ಡೇವಿಡ್ ಮಿಲ್ಲರ್ (38 ಎಸೆತ), ಟ್ರಾವಿಸ್ ಹೆಡ್ (39 ಎಸೆತ) ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಟಾಪ್-5 ಆಟಗಾರರಾಗಿದ್ದಾರೆ.
ವೇಗದ ಫಿಫ್ಟಿ: ಇನ್ನೂ ವೈಭವ್ ಈ ಆವೃತ್ತಿಯಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಜತೆಗೆ ಅತೀ ಕಡಿಮೆ ವಯಸ್ಸಿಗೆ ಈ ಸಾಧನೆ ಮಾಡಿದ ಮೊದಲಿಗನಾಗಿದ್ದಾರೆ.
ಇಡೀ ಐಪಿಎಲ್ನಲ್ಲೇ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಲ್ಲಿದೆ. 2023ರ ಆವೃತ್ತಿಯಲ್ಲಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ್ದರು. 2018ರಲ್ಲಿ ಕೆ.ಎಲ್ ರಾಹುಲ್, 2022ರಲ್ಲಿ ಪ್ಯಾಟ್ ಕಮ್ಮಿನ್ಸ್ (ಅಂದು ಕೆಕೆಆರ್) ಮುಂಬೈ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿದ್ದಾರೆ.
- ಈ ಆವೃತ್ತಿಯಲ್ಲಿ ವೇಗದ ಫಿಫ್ಟಿ ಬಾರಿಸಿದ ಆಟಗಾರರು
ವೈಭವ್ (ರಾಜಸ್ಥಾನ್) – 50 ರನ್ – 17 ಎಸೆತ
ಪೂರನ್ (ಎಲ್ಎಸ್ಜಿ) – 50 ರನ್, 18 ಎಸೆತ
ಮಾರ್ಷ್ (ಎಲ್ಎಸ್ಜಿ) – 50 ರನ್, 21 ಎಸೆತ
ಹೆಡ್ (ಎಸ್ಆರ್ಹೆಚ್) – 50 ರನ್, 21 ಎಸೆತ
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...