NEWSನಮ್ಮಜಿಲ್ಲೆನಮ್ಮರಾಜ್ಯ

ಏಪ್ರಿಲ್‌ವೇಳೆಗೆ ರಾಜಧಾನಿ ರಸ್ತೆಗಿಳಿಯಲಿವೆ 1400 ಎಲೆಕ್ಟ್ರಿಕ್ ಬಸ್‌ಗಳು: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಸಾರಿಗೆ ಇಲಾಖೆ, ನಗರದ ಜೀವನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಮತ್ತು ಟಾಟಾ ಮೋಟರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ 100 ವಿದ್ಯುತ್ ಚಾಲಿತ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ಮಂಗಳವಾರ (ಡಿ 26) ಬಸ್‌ಗಳಿಗೆ ಚಾಲನೆ ನೀಡದ ಬಳಿಕ ಮುಖ್ಯಮಂತ್ರಿಯೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರ ಸಚಿವರು ಅಧಿಕಾರಿಗಳು ಬಸ್​​ನಲ್ಲಿ ಒಂದು ರೌಂಡ್ ಹಾಕಿ ಬಂದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತುತ 100 ಬಸ್‌ಗಳಿಗೆ ಚಾಲನೆ ನೀಡಲಾಗಿದೆ ಬರುವ ಏಪ್ರಿಲ್ 2024ರ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆ ಆಗಲಿವೆ ಎಂದು ಹೇಳಿದರು.

ಈವರೆಗೂ ರಾಜ್ಯ ಸಾರಿಗೆಯ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಮಂದಿ ಬಿಎಂಟಿಸಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅವರಲ್ಲಿ ಎಲ್ಲ ಜಾತಿ, ಧರ್ಮ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೂ ಈ ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ.

ಅಂದರೆ ಅವರೇ ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ. ಅದು ಅವರಿಂದ ಸಾಧ್ಯವಾಗಲಿಲ್ಲ ಅದಕ್ಕೆ ನಮಗೂ ಮಾಡಲು ಬಿಡಬಾರದು ಎಂಬ ನಿಟ್ಟಿನಲ್ಲಿ ಈ ರೀತಿ ನಡೆದುಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಇನ್ನು ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿದ್ದು, ಇದರಿಂದ ರಾಜ್ಯದ ಆರ್ಥಿಕ ಬೆಳವಣಿಗೆಯಾಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ ಎಂದು ತಿಳಿಸಿದರು.

ಅಲ್ಲದೆ ಆ ಉಳಿತಾಯವಾಗುತ್ತಿರುವ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದು ಸರ್ಕಾರದ ಜನೋಪಯೋಗಿ ಯೋಜನೆಯ ಪರಿಣಾಮಕಾರಿ ಫಲಿತಾಂಶವನ್ನು ವಿವರಿಸಿದರು.

ರಾಜ್ಯದ 4.30 ಕೋಟಿ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಈ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ. ಅಲ್ಲದೆ ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಬಿಎಂಟಿಸಿ ಎಂಡಿ ಸತ್ಯವತಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ