ನಂದಿ ಬೆಟ್ಟದಲ್ಲಿ 14ನೇ ಸಚಿವ ಸಂಪುಟ ಸಭೆ: ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ

- ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ರೂ. ಖರ್ಚಾಗಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಬೆಳಗ್ಗೆ ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಎತ್ತಿನಹೊಳೆ ಯೋಜನೆಯಡಿ 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.
ಇನ್ನು 9,807 ಕೋಟಿ ರೂ. ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ನ ಕೆಲಸ 85% ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8,000 ಕೋಟಿ ರೂ.ಗಳು ಬೇಕಾಗಿದೆ. ಬಾಕಿ ಉಳಿದಿರುವುದು 6,000 ಚಿಲ್ಲರೆ ಕೋಟಿ. ಎತ್ತಿನಹೊಳೆ ಯೋಜನೆಯಿಂದ ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ವಿವರಿಸಿದರು.

ಬೆಂಗಳೂರು ಭಾಗದ ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2050 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1,125.25 ಕೋಟಿ ರೂ. ಮಂಜೂರು ಮಾಡಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ 10 ಕೋಟಿ ರೂ. ವೆಚ್ಚದ ಎರಡು ವಸತಿ ಶಾಲೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಇನ್ನು ಬೆಂಗಳೂರು ಕೇಂದ್ರ ವಿವಿಗೆ ದಿವಂಗತ ಮಾಜಿ ಪ್ರಧಾನಿ “ಡಾ.ಮನಮೋಹನ್ ಸಿಂಗ್ ಅವರ ಹೆಸರಿಡಲು ತೀರ್ಮಾನ ಮಾಡಲಾಯಿತು. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ. ಜತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದರು.
ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗೃಹ ಮಂತ್ರಿ ಎಚ್.ಕೆ. ಪಾಟೀಲ್, ಸಚಿವ ಮುನಿಯಪ್ಪ, ಎಂ.ಸಿ. ಸುಧಾಕರ್, ಬೈರತಿ ಸುರೇಶ್, ಸಚಿವ ಸಂಪುಟ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...