NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳ- ಇಂದು ಮಧ್ಯಾಹ್ನವೇ ಆದೇಶ : ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನ ಮತ್ತು ಕೆಪಿಟಿಸಿಎಲ್ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದ್ದು ಇಂದೇ (ಮಾ.16) ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಹೆಚ್ಚಳ ಮಾಡುತ್ತೇವೆ. ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಹೆಚ್ಚಳ ಮಾಡಿ ಇಂದು ಮಧ್ಯಾಹ್ನವೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.

ಬುಧವಾರ ಸಾರಿಗೆ ನೌಕರರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಮತ್ತು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳೊಂದಿಗೆ ನಡೆದ ಸಭೆ ವಿಫಲವಾಗಿದೆ. ಆದರೆ, ಇಂದು ದಿಡೀರ್‌ ಎಂದು ಸಿಎಂ ಶೇ.15ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸುತ್ತೇವೆ ಎಂದು ಹೇಳಿದ್ದು, ಇದನ್ನು ನೌಕರರು ಮತ್ತು ನೌಕರರ ಸಂಘಟನೆಗಳು ಯಾವ ರೀತಿ ತೆಗೆದುಕೊಳ್ಳುತ್ತೇವೆ ಎಂಬುದರ ಬಗ್ಗೆ ಕಾದು ನೋಡಬೇಕಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...