NEWSಕ್ರೀಡೆದೇಶ-ವಿದೇಶ

ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದ ಉಮ್ರಾನ್ ಮಲಿಕ್

ವಿಜಯಪಥ ಸಮಗ್ರ ಸುದ್ದಿ

ಗುವಾಹಟಿ: ಜಮ್ಮು-ಕಾಶ್ಮೀರ ಮೂಲದ ಬೌಲರ್ ಉಮ್ರಾನ್ ಮಲಿಕ್ ತನ್ನ ವೇಗದ ಬೌಲಿಂಗ್ ಮೂಲಕ ಐಪಿಎಲ್‍ನಲ್ಲಿ (IPL) ಮಿಂಚಿ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಆಟಗಾರ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

ಟೀಂ ಇಂಡಿಯಾ ವೇಗಿ ಎಂದೆ ಕರೆಸಿಕೊಳ್ಳುವ ಉಮ್ರಾನ್ ಮಲಿಕ್ ಮಂಗಳವಾರ ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಗಂಟೆಗೆ 156 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಭಾರತ ವೇಗದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ 14ನೇ ಓವರ್ ಎಸೆಯಲು ಬಂದ ಉಮ್ರಾನ್ ಮಲಿಕ್ ತನ್ನ ಸರದಿಯ ಎರಡನೇ ಓವರ್‌ನಲ್ಲಿ 156 ಕಿ.ಮೀ ವೇಗದ ಎಸೆತ ದಾಖಲಿಸಿದ್ದಾರೆ.

ಈ ಹಿಂದೆ ಗಂಟೆಗೆ 153.36 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದ ಜಸ್ಪ್ರೀತ್ ಬುಮ್ರಾ ಭಾರತದ ವೇಗದ ಬೌಲರ್ ಎಂಬ ದಾಖಲೆಯನ್ನು ಮಾಡಿದ್ದರು. ಇದೀಗ ಉಮ್ರಾನ್ ಮಲಿಕ್ ಆ ದಾಖಲೆಯನ್ನು ಪುಡಿಗಟ್ಟಿ ತಮ್ಮ ಹೆಸರಿನ ಹಿಂದೆ ನೂತನ ದಾಖಲೆ ಬರೆದು ಕ್ರಿಕೆಟ್‌ ಪ್ರೇಮೆಗಳ ಮನದಲ್ಲಿ ಹಚ್ಚಳಿಯದೆ ಉಳಿದಿದ್ದಾರೆ.

ಟೀಂ ಇಂಡಿಯಾ ವೇಗಿಗಳ ಪೈಕಿ ಮೊಹಮ್ಮದ್ ಶಮಿ ಅತಿ ವೇಗದ ಬೌಲಿಂಗ್‍ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶಮಿ ಗಂಟೆಗೆ 153.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ನವದೀಪ್ ಸೈನಿ ಗಂಟೆಗೆ 152.85 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ವೇಗದ ಬೌಲರ್‌ಗಳ ದಾಖಲೆಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧ ಬ್ಯಾಟಿಂಗ್‍ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್ ಮಿಂಚಿದರೆ, ಬೌಲಿಂಗ್‍ನಲ್ಲಿ ಉಮ್ರಾನ್ ಮಲಿಕ್, ಸಿರಾಜ್ ಭರ್ಜರಿ ಆಟ ಪ್ರದರ್ಶಿಸಿದರು. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ಪಂದ್ಯದಲ್ಲಿ ವೇಗದ ಎಸೆತದ ದಾಖಲೆಯೊಂದಿಗೆ ಉಮ್ರಾನ್ ಮಲಿಕ್ 3 ವಿಕೆಟ್ ಪಡೆದು ಭಾರತದ 67 ರನ್‍ಗಳ ದೊಡ್ಡ ಮೊತ್ತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...