NEWSನಮ್ಮರಾಜ್ಯಬೆಂಗಳೂರು

ದಸರಾ ಹಬ್ಬ: ಹೆಚ್ಚು ಉತ್ಪತ್ತಿಯಾಗಿದ್ದ 17.5 ಸಾವಿರ ಮೆ.ಟನ್ ತ್ಯಾಜ್ಯ ವಿಲೇವಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆ ರಸ್ತೆ ಬದಿ, ಮಾರುಕಟ್ಟೆಗಳಲ್ಲಿ ಹೆಚ್ಚು ಉತ್ಪತ್ತಿಯಾಗಿದ್ದ ತ್ಯಾಜ್ಯವನ್ನು ಕಳೆದೆರಡು ದಿನಗಳಿಂದ ಪರಿಣಾಮಕಾರಿಯಾಗಿ ತೆರವುಗೊಳಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ.

ದಸರಾ ಹಬ್ಬದ ಹಿನ್ನೆಲೆ ಆಯುಧ ಪೂಜೆಗಾಗಿ ನಗರದ ಎಲ್ಲಾ ಮಾರುಕಟ್ಟೆ ಹಾಗೂ ರಸ್ತೆ ಬದಿಗಳಲ್ಲಿ ಬಾಳೆ ಕಂದು, ಬೂದು ಕುಂಬಳಕಾಯಿ, ಎಲೆಗಳು ಹಾಗೂ ಹೂವು ಮಾರಾಟ ಮಾಡಲಾಗಿದೆ. ಇದರಿಂದ ಉತ್ಪತ್ತಿಯಾದ ತ್ಯಾಜ್ಯವನ್ನು ಸ್ಥಳದಲ್ಲೇ ಬಿಟ್ಟಿದ್ದು, ಅದನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸಂಸ್ಥೆಯಿಂದ ನಿರಂತರವಾಗಿ ಹಾಗೂ ಪರಿಣಾಮಕಾರಿಯಾಗಿ ತೆರವು ಕಾರ್ಯವನ್ನು ನಡೆಸಲಾಗುತ್ತಿದೆ.

ನಗರದಲ್ಲಿ ಪ್ರತಿನಿತ್ಯ ಸರಿಸುಮಾರು 4900 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ 12ನೇ ಅಕ್ಟೋಬರ್ ರಂದು 6306 ಮೆ.ಟನ್, 13ರಂದು 5561 ಮೆ.ಟನ್ ಹಾಗೂ ಇಂದು ಸುಮಾರು 5866 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗಿದ್ದು, ಹಸಿ ತ್ಯಾಜ್ಯವನ್ನು ಸಂಸ್ಕರಣಾ ಘಟಕಗಳು ಹಾಗೂ ಮಿಶ್ರ ತ್ಯಾಜ್ಯವನ್ನು ಲ್ಯಾಂಡ್ ಫಿಲ್‌ನಲ್ಲಿ ವಿಲೇವಾರಿ ಮಾಡಲಾಗಿದೆ.

ಮಾರುಕಟ್ಟೆಗಳಲ್ಲಿ ತ್ಯಾಜ್ಯ ವಿಲೇವಾರಿ: ನಗರದಲ್ಲಿ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್.ಮಾರುಕಟ್ಟೆ, ಗಾಂಧಿಬಜಾರ್, ದೇವಸಂದ್ರ ಮಾರುಕಟ್ಟೆ, ಕೆ.ಆರ್ ಪುರ ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ, ರಸಲ್ ಮಾರುಕಟ್ಟೆ, ಪಾಲಿಕೆ ಬಜಾರ್ ಸೇರಿದಂತೆ 12 ಮಾರುಕಟ್ಟೆಗಳಲ್ಲಿ ಕಳೆದ 2 ದಿನಗಳಲ್ಲಿ 414 ಮೆ.ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ. ಇಂದು 150ಕ್ಕೂ ಹೆಚ್ಚು ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ.

ಹೆಚ್ಚುವರಿ ಯಂತ್ರೋಪಕರಣಗಳ ಬಳಕೆ: ನಗರದ ಮಾರುಕಟ್ಟೆ ಹಾಗೂ ರಸ್ತೆ ಬದಿಗಳಲ್ಲಿ ಹೆಚ್ಚುವರಿಯಾಗಿ ತ್ಯಾಜ್ಯ ಉತ್ಪಾದನೆಯಾಗಿದ್ದ ಕಾರಣ ಆಯಾ ವಲಯ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳ ನೇತೃತ್ವದಲ್ಲಿ ಹೆಚ್ಚುವರಿಯಾಗಿ ಜೆಸಿಬಿಗಳನ್ನು ಬಳಸಿಕೊಂಡು ಆಟೋ ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್‌ಗಳಲ್ಲಿ 3/4 ಟ್ರಿಪ್‌ಗಳು ತುಂಬಿಕೊಂಡು ವಿಲೇವಾರಿ ಮಾಡುವ ಕೆಲಸ ಮಾಡಲಾಗಿದೆ.

ಕಾಲಮಿತಿಯೊಳಗಾಗಿ ತ್ಯಾಜ್ಯ ತೆರವು: ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದಿಂದ ಉತ್ಪತ್ತಿಯಾದ ತ್ಯಾಜ್ಯವನ್ನು ಕಾಲಮಿತಿಯೊಳಗಾಗಿ ತೆರವುಗೊಳಿಸುವ ಕೆಲಸ ಹಾಗೂ ರಸ್ತೆ ಬದಿ ಉತ್ಪತ್ತಿಯಾಗುವ ಕಸ ಸುರಿಯುವ ಸ್ಥಳಗಳನ್ನು ಕೂಡಾ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ.

3 ದಿನಗಳಲ್ಲಿ ತ್ಯಾಜ್ಯ ವಿಲೇವಾರಿಯಾದ ವಿವರ
ದಿನಾಂಕ – ಉತ್ಪತ್ತಿಯಾದ ತ್ಯಾಜ್ಯ (ಮೆ.ಟನ್ ಗಳಲ್ಲಿ)
1. 12-10-2024 : 6306 ಮೆ.ಟ
2. 13-10-2024 : 5561 ಮೆ.ಟ
3. 14-10-2024 : 5866 ಮೆ.ಟ

Leave a Reply

error: Content is protected !!
LATEST
ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ