ನ್ಯೂಡೆಲ್ಲಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಜನರು ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಮೃತಪಟ್ಟಿರುವ ದುರಂತ ಘಟನೆ ರಾತ್ರಿ ಸಂಭವಿಸಿದೆ.
ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ದೆಹಲಿ ರೈಲು ನಿಲ್ದಾಣದಲ್ಲಿ ಎರಡು ರೈಲುಗಳು ವಿಳಂಬವಾಗಿದ್ದರಿಂದ ಶನಿವಾರ ರಾತ್ರಿ ಜನದಟ್ಟಣೆ ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 18 ಜನರು ಕಾಲ್ತುಳಿತಕ್ಕೆ ನಿಲುಕಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 10 ಮಂದಿ ಮಹಿಳೆಯರು, ಮೂವರು ಮಕ್ಕಳು ಮತ್ತು ಇಬ್ಬರು ಪುರುಷರು ಅಸುನೀಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಬೆನ್ನಲೇ ಲೇಡಿ ಹಾರ್ಡಿಂಗ್ ಆಸ್ಪತ್ರೆಯಿಂದ ಇನ್ನೂ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿವೆ.
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ಹೋಗಲು ಎರಡು ರೈಲುಗಳು ತಡವಾಗಿ ಬಂದಿವೆ. ಇದರಿಂದಾಗಿ ದೆಹಲಿ ರೈಲು ನಿಲ್ದಾಣದಲ್ಲಿ ಜನ ಸಂಖ್ಯೆ ಹೆಚ್ಚಾಗಿದೆ, ವಾರಾಂತ್ಯವಾಗಿದ್ದರಿಂದ ರೈಲು ನಿಲ್ದಾಣದಲ್ಲಿ ಕುಂಭ ಮೇಳಕ್ಕೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಪ್ರಯಾಗ್‌ರಾಜ್ ಮೂಲಕ ಹಾದುಹೋಗುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ರೈಲುಗಳು ನಿಲ್ದಾಣಕ್ಕೆ ಬರುವುದು ವಿಳಂಬವಾದೆ.
ಈ ರೈಲುಗಳ ಪ್ರಯಾಣಿಕರು 12, 13 ಮತ್ತು 14, 15ನೇ ಪ್ಲಾಟ್‌ಫಾರ್ಮ್‌ಗಳಲ್ಲಿ ನಿಂತಿದ್ದರು. ಈ ವೇಳೆ ತಡವಾಗಿ ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 14ಕ್ಕೆ ಬಂದಾಗ ಅನೇಕ ಜನರು ಅದರಲ್ಲಿ ಹತ್ತಲು ನುಗ್ಗಿದ್ದಾರೆ. ರೈಲು ತಡವಾಗಿ ಬಂದಿದ್ದರಿಂದ ರೈಲು ಹತ್ತಲು ನೂಕುನುಗ್ಗಲಾಗಿದೆ. ಇದರಿಂದಾಗಿ ರಾತ್ರಿ 8 ಗಂಟೆ ಸುಮಾರಿಗೆ ಕಾಲ್ತುಳಿತ ಉಂಟಾಗಿದೆ.
ರೈಲ್ವೆ ನಿಲ್ದಾಣದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸಹ ಸ್ಥಳಕ್ಕೆ ರವಾನಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ದೆಹಲಿ ಪೊಲೀಸರು ಮತ್ತು ಆರ್‌ಪಿಎಫ್ (ರೈಲ್ವೆ ಪೊಲೀಸ್ ಪಡೆ) ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಠಾತ್ ಜನದಟ್ಟಣೆಯನ್ನು ಸ್ಥಳಾಂತರಿಸಲು ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ” ಎಂದು ಸಚಿವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೀವಹಾನಿಯ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆಯಿಂದಾಗಿ ಪ್ರಧಾನಿ ಮೋದಿ ಸೇರಿದಂತೆ ಇತರ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.