Please assign a menu to the primary menu location under menu

NEWS

₹18,177 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿ: ಪ್ರಧಾನಿಗೆ ಸಿದ್ದರಾಮಯ್ಯ ಮನವಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಮಾಡಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿದ್ದು, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಅದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನು ಈ ಮೊದಲೇ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿವೆ. ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಬರದಿಂದ ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ 22-09-2023 ರಂದ ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

ಹೀಗಾಗಿ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದ್ದಾರೆ.

ಇನ್ನು ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಎನ್‌.ಡಿ.ಆರ್‌.ಎಫ್. ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ ಎಂದಿದ್ದಾರೆ.

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ.

ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದೇನೆ. ಜತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಭೇಟಿ ವೇಳೆ ಕೃಷಿ ಸಚಿವ ಕೃಷ್ಣಬೈರೇಗೌಡ ಇದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ