NEWSಆರೋಗ್ಯ

2 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯ ನಿರ್ಮಾಣ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊರೊನಾ ಸೋಂಕು ದೃಢಪಟ್ಟು ಗುಣಮುಖರಾಗಿ, ಮನೆಗೆ ತೆರಳಿದ್ದ ವ್ಯಕ್ತಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದು, ಆ ವ್ಯಕ್ತಿಯ ಗಂಟಲ ದ್ರವ, ರಕ್ತದ ಮಾದರಿಯನ್ನು ವೈದ್ಯರು ಪರೀಕ್ಷೆಗೆ ಕಳುಹಿಸಿದ್ದು, ಎರಡು ಮೂರು ದಿನದಲ್ಲಿ ವರದಿ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ  ತಿಳಿಸಿದ್ದಾರೆ.

ನಗರದ ನೂತನ ಜಿ.ಪಂ.ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಜ್ವರದಿಂದ ಬಳಲುತ್ತಿರುವೆ ಎಂದು ಆ ವ್ಯಕ್ತಿ ಮತ್ತೆ ಜಿಲ್ಲೆಯ ಕೋವಿಡ್ 19 ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ಗೆ ದಾಖಲಾಗಿದ್ದಾರೆ. ಸದ್ಯ ಆ ವ್ಯಕ್ತಿಯ ಗಂಟಲ ದ್ರವ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವುದು ಬೇಡ ಎಂದರು.

ಜಿಲ್ಲೆಯಲ್ಲಿ ಶೇ.80ರಷ್ಟು ಆಹಾರ ಧಾನ್ಯ ಪೂರೈಕೆ ಕಾರ್ಯ ಮುಗಿದಿದ್ದು, ಸದ್ಯದಲ್ಲಿಯೇ ಎಲ್ಲಾ ಸಾರ್ವಜನಿಕರಿಗೂ ಸಹ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು.

ಕೊರೊನಾ ವೈರಸ್ ಪತ್ತೆ ಹಚ್ಚುವ ಸಲುವಾಗಿ ಮೈಸೂರಿಗೆ ಸೋಂಕಿತರ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಕಳುಹಿಸಲಾಗುತ್ತಿತ್ತು. ಇದರಿಂದ ವರದಿ ಬರುವುದು ತಡವಾಗುತ್ತಿದೆ. ಈ ನಿಟ್ಟಿನಲ್ಲಿ ಮೇ ಅಂತ್ಯದೊಳಗೆ 2 ಕೊಟಿ ರೂ. ವೆಚ್ಚದಲ್ಲಿ ಕೊರೊನಾ ವೈರಸ್ ಮಾದರಿ ಪತ್ತೆ ಹಚ್ಚುವ ಪ್ರಯೋಗಾಲಯವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಿರ್ಮಾಣ ಮಾಡಲಾಗುವುದು ಎಂದರು.

ಬಳಿಕ ಜಿಲ್ಲಾಡಳಿತ ವಶಕ್ಕೆ ಪಡೆದಿರುವ ನಗರದ ಅಶ್ವಿನಿ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವರು ಪರಿಶೀಲಿಸಿದರು.

ಶಾಸಕರಾದ ಕೆ.ಜಿ ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಮನ್ ಡಿ.ಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿಗಳಾದ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ನಾನಾ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

ಲಾಕ್ ಡೌನ್ ಪರಿಣಾಮಗಳು ಏನೇ ಇದ್ದರೂ ಜಿಲ್ಲೆಯ ಜನತೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವರು ಶ್ಲಾಘಿಸಿದರಲ್ಲದೆ, ಮುಂದೆಯೂ ಇದೇ ರೀತಿ ಸಹಕಾರ ನೀಡುವ ಮೂಲಕ ಕೊರೋನಾ ಸೋಂಕು ಜಿಲ್ಲೆಗೆ ಬಾರದಂತೆ ಜಾಗ್ರತೆವಹಿಸುವಂತೆ ಮನವಿ ಮಾಡಿದರು.

Leave a Reply

error: Content is protected !!
LATEST
ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು