ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಯಲಹಂಕ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ನಡೆದ ಸಭೆಯಲ್ಲಿ, ಟಾಟಾ ನಗರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡು ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಸಾರ್ವಜನಿಕರೊಬ್ಬರು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕೂಡಲೆ ಪ್ರಸ್ತಾವನೆ ಸಿದ್ದಪಡಿಸಿ, ಟೆಂಡರ್ ಕರೆದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಹೇಳಿದರು.
ಅವೈಜ್ಞಾನಿಕ ರಸ್ತೆ ಉಬ್ಬುಗಳಿದ್ದರೆ ತೆರವುಗೊಳಿಸಿ: ಕೆನರಾ ಬ್ಯಾಂಕ್ ಕಾಲೋನಿಯ ರಾಜಾರಾಂ ಮೋಹನ ರಾಯ್ ರಸ್ತೆಯಲ್ಲಿ ಅನಧಿಕೃತವಾಗಿ ರಸ್ತೆ ಉಬ್ಬು(ಹಂಪ್)ಗಳನ್ನು ನಿರ್ಮಿಸಿದ್ದು, ಅದನ್ನು ತೆರವುಗೊಳಿಸಲು ಕೋರಿದ್ದರ ಬಗ್ಗೆ ಪ್ರತಿಕ್ರಿಯಿಸಿ, ರಸ್ತೆ ಉಬ್ಬು ಮಾಡುವಾಗ ಪೊಲೀಸ್ ಅನುಮತಿ ಪಡೆಯಲಾಗಿರುತ್ತದೆ. ಈ ಪೈಕಿ ಸಂಬಂಧಪಟ್ಟ ಅಧಿಕಾರಿ ಕೂಡಲೆ ಸ್ಥಳ ಪರಿಶೀಲಿಸಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದಲ್ಲಿ, ಅದನ್ನು ತೆರವುಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಫರ್ ಜೋನ್ ನಲ್ಲಿ ಕಟ್ಟಡಗಳ ನಿರ್ಮಿಸಿರುವವರ ಮೇಲೆ ಕ್ರಮ: ನರಸೀಪುರ ಕೆರೆಯ ಬಫರ್ ಜೋನ್ ನಲ್ಲಿ ಅನಧಿಕೃತವಾಗಿ 4 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡುತ್ತಿದ್ದು, ಅದನ್ನು ತೆರವುಗೊಳಿಸಲು ಕೋರಿದ್ದರ ಸಂಬಂಧ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಬೆಸ್ಕಾಂಗೆ ನೋಟೀಸ್ ನೀಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿಬೇಕು. ಅನಂತರ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಕನ್ನಡ ನಾಮಫಲಕ ಅಳವಡಿಸಿರುವ ವರದಿ ಕೊಡಿ: ಜಕ್ಕೂರು ಹಾಗೂ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಬರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಅಳವಡಿಸಿರುವುದಿಲ್ಲ. ಅದನ್ನು ಸರಿಪಡಿಸಲು ಕೋರಿದ್ದರ ಕುರಿತು ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸೂಚನೆ ನೀಡಿದರು.
ಬಹುತೇಕ ಸಮಸ್ಯೆಗಳ ಇತ್ಯರ್ಥ: ಕಳೆದ ಬಾರಿ ನಾಗರೀಕರಿಂದ ಬಂದಂತಹ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ನಾಗರೀಕರಿಂದ 35 ದೂರುಗಳು ಬಂದಿದ್ದು, ಅವುಗಳನ್ನು ಕೂಡಾ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ನಾಗರೀಕರಿಂದ ಬಂದಂತಹ ಪ್ರಮುಖ ಅಹವಾಲುಗಳು: 1. ಶಿವನಹಳ್ಳಿ ಕೆರೆ ಬಳಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಮನವಿ. 2. ರಾಮಚಂದ್ರಪುರ ಮುಖ್ಯರಸ್ತೆಯಲ್ಲಿ ರಸ್ತೆ ಅಗಲೀಕರಣ ಪೂರ್ಣಮಾಡಿಕೊಡಲು ಮನವಿ. 3. ನರಸೀಪುರ ಬಡಾವಣೆಯಲ್ಲಿ ಡ್ರೈನ್ ಬ್ಲಾಕ್ ಆಗಿದ್ದು, ಅದನ್ನು ತೆರವು ಮಾಡಲು ಮನವಿ. 4. ಭುವನೇಶ್ವರಿ ನಗರದಲ್ಲಿ ಮನೆ-ಮನೆ ಕಸ ಸಂಗ್ರಹಿಸುವುದನ್ನು ಸಮರ್ಪಕವಾಗಿ ನಿರ್ವಹಿಸಲು ಮನವಿ.
5. ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳನ್ನು ತೆರವುಗೊಳಿಸಿ ಹೂಳೆತ್ತಲು ಮನವಿ. 6. ದೊಡ್ಡಬೆಟ್ಟಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಅದನ್ನು ಬಗೆಹರಿಸಲು ಮನವಿ. 7. ಪ್ಲಾಸ್ಟಿಕ್ ಬ್ಯಾನ್ ಇದ್ದು, ಅದನ್ನು ಸಂಪೂರ್ಣ ನಿಯಂತ್ರಿಸಲು ಮನವಿ. 8. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಸೇವಿಸುವುದನ್ನು ತಡೆಯಲು ಮನವಿ. 9. ತಿಂಡ್ಲು ಬಳಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು, ಅದನ್ನು ನಿಯಂತ್ರಿಸಲು ಮನವಿ.
10. ಜಿಕೆವಿಕೆ ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಶೆಡ್ ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ. 11. ನರಸೀಪುರ 5ನೇ ಕ್ರಾಸ್ ನಲ್ಲಿ ಚರಂಡಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ. 12. ಒಳಚರಂಡಿಗಳಲ್ಲಿ ಸ್ವಚ್ಚತೆ ಮಾಡಿ, ಕೊಳಚೆ ನೀರು ಹೋರಬರದಂತೆ ಕ್ರಮವಹಿಸಲು ಮನವಿ ಮಾಡಿದ್ದಾರೆ.
ಈ ವೇಳೆ ವಲಯ ಆಯುಕ್ತ ಕರೀಗೌಡ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ರಂಗನಾಥ್, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಲಮಂಡಳಿ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Related
You Might Also Like
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...
ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ...
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...