CrimeNEWSನಮ್ಮಜಿಲ್ಲೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ : 20 ಎಕರೆಗೂ ಹೆಚ್ಚು ಕಬ್ಬು, 50 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿ ಖಂಡಿಸಿ ಲೊಕನಹಳ್ಳಿ ರೈತರಿಂದ ರಸ್ತೆ ತಡೆ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 50 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿರುವ ಘಟನೆ ಭಾನುವಾರ ಜರುಗಿದೆ.

ಲೊಕ್ಕನಹಳ್ಳಿ ಗ್ರಾಮದ ಮೇಲು ಸ್ವಾಮಿ, ರುಕ್ಮಿಣಿ, ಸತೀಶ್ ಕುಮಾರ್ ಎಂಬುವವರು ತಮ್ಮ ಜಮೀನುಗಳಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಬೆಳೆದು 18 ತಿಂಗಳಾಗಿದ್ದರೂ ಸಹ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯವರು ಕಬ್ಬು ಕಟಾವು ಮಾಡದೇ ಇರುವುದರಿಂದ ಈ ದುರ್ಘಟನೆ ನಡೆದಿದೆ.

ನಮ್ಮ ಈ ನಷ್ಟಕ್ಕೆ ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆ ಅವರು ಪರಿಹಾರ ನೀಡಬೇಕು. ಚಾಮರಾಜನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ತಹಸೀಲ್ದಾರ್ ಅವರು ಸ್ಥಳಕ್ಕೆ ಆಗಮಿಸಿ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು ಇಲ್ಲದಿದ್ದರೆ ಸ್ಥಳದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಸತೀಶ್ ಕುಮಾರ್ ಮಾತನಾಡಿ, ನಾವು ಕಬ್ಬು ಬೆಳೆದು 18 ತಿಂಗಳಗಳಾಗಿದೆ. ಆದರೂ ಸಹ ಇದುವರೆಗೂ ಕಬ್ಬು ಕಟಾವು ಮಾಡಿಲ್ಲ, ಈ ಘಟನೆಗೆ ಬಣ್ಣಾರಿ ಅಮ್ಮನ ಕಾರ್ಖಾನೆಯವರೇ ನೇರ ಹೊಣೆ. ಜಮೀನಿನಲ್ಲಿದ್ದ ಹನಿ ನೀರಾವರಿ ಪೈಪ್, ಸ್ಟಾರ್ಟರ್, ಮೋಟಾರ್ ಕೇಬಲ್‌ಗಳು ಸುಟ್ಟುಹೋಗಿ 20 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಸಂಬಂಧಿಸಿದವರು ಸ್ಥಳಕ್ಕಾಗಮಿಸಿ ಸೂಕ್ತ ಪರಿಹಾರ ಕೊಡದಿದ್ದರೆ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ರೈತ ಮುತ್ತುವೇಲ್ ಮಾತನಾಡಿ, ಲೋಕನಹಳ್ಳಿ ಭಾಗದಲ್ಲಿ ಐವತ್ತಕ್ಕೂ ಹೆಚ್ಚು ರೈತರು ಕಬ್ಬು ಬೆಳೆದಿದ್ದೇವೆ. 18 ತಿಂಗಳುಗಳಾದರೂ ಕಬ್ಬು ಕಟಾವು ಮಾಡಿಲ್ಲ. ಇದರಿಂದ ನಮಗೆ ನಷ್ಟ ಉಂಟಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಟ್ರಾಫಿಕ್ ಜಾಮ್ : ಲೊಕ್ಕನಹಳ್ಳಿ ಗ್ರಾಮದ ರೈತರುಗಳ ಇಪ್ಪತ್ತಕ್ಕೂ ಹೆಚ್ಚು ಎಕರೆ ಕಬ್ಬು, ಬೆಂಕಿಗಹುತಿಯಾಗಿರುವುದನ್ನು ಖಂಡಿಸಿ ಲೋಕನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶಾಮಿಯಾನ ಹಾಕಿ ಪ್ರತಿಭಟಿಸುತ್ತಿದ್ದ ಹಿನ್ನೆಲೆ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಅಂತಾರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ತರಕಾರಿ ವಾಹನಗಳು ಬಸ್‌ಗಳು, ದ್ವಿಚಕ್ರ ವಾಹನ, ಕಾರುಗಳು ಸುಮಾರು ಒಂದು ಕಿಲೋಮೀಟರ್‌ವರೆಗೂ ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...