NEWSನಮ್ಮರಾಜ್ಯರಾಜಕೀಯ

ಬಾಡಿಗೆ ಮನೆಯವರಿಗೂ 200 ಯೂನಿಟ್ ಉಚಿತ ವಿದ್ಯುತ್: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಬಾಡಿಗೆ ಮನೆಯವರಿಗೂ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆಯ ದಿನವಾದ ಮಂಗಳವಾರ ವಿಧಾನಸೌಧದ ಮುಂಭಾಗದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆ ಲಾಭ ಬಾಡಿಗೆ ಮನೆಯವರಿಗೂ ಸಿಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದ ಅವರು, 200 ಯೂನಿಟ್ ಉಚಿತ ವಿದ್ಯುತ್‍ನ ಗೃಹಜ್ಯೋತಿ ಯೋಜನೆ ಎಲ್ಲರಿಗೂ ಸಿಗುತ್ತದೆ ಎಂದು ಸ್ಪಷ್ಟಪಡಿಸಿದರು.

ಯಾರ್ಯಾರು 200 ಯೂನಿಟ್ ಒಳಗೆ ವಿದ್ಯುತ್ ಬಳಸುತ್ತಾರೋ ಅವರಿಗೆಲ್ಲ ಉಚಿತ ವಿದ್ಯುತ್‍ನ ಲಾಭ ಸಿಗಲಿದೆ. ಬಾಡಿಗೆದಾರರಿಗೂ 200 ಯೂನಿಟ್‍ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ, ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

ವಾಣಿಜ್ಯ ಬಳಕೆಗೆ ಉಚಿತ ವಿದ್ಯುತ್ ಯೋಜನೆ ಅನ್ವಯಿಸುವುದಿಲ್ಲ. ಒಂದು ವೇಳೆ ವಾಣಿಜ್ಯ ಚಟುವಟಿಕೆಗಳಿಗೆ ವಿದ್ಯುತ್ ಬಳಸುತ್ತಿದ್ದರೆ ಅಂತಹವರಿಗೆ ಉಚಿತ ವಿದ್ಯುತ್ ನೀಡಲ್ಲ, ಬಾಡಿಗೆದಾರರಿಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಖಚಿತಪಡಿಸಿದರು.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು