KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಸಾರಿಗೆ ನಿಗಮಕ್ಕೆ ನೇಮಕಗೊಂಡ ನೂತನ ಚಾಲಕ ಕಂ ನಿರ್ವಾಹಕರಿಗೆ ಆಯೋಜಿಸಿದ್ದ ನಿಯೋಜನಾ ಆದೇಶ ಪತ್ರ ವಿತರಣೆ ಸಮಾರಂಭದಲ್ಲಿ ಆದೇಶ ಪತ್ರ ನೀಡಿದ ಬಳಿಕ ಮಾತನಾಡಿದರು.
ಹೊಸದಾಗಿ ನೇಮಕಗೊಂಡ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಲಹೆ ನೀಡಿದರು.
ಇನ್ನು ಅಪಘಾತ ಸಂಭವಿಸದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ. ನಿಗಮವು ಕೊರೋನಾ ನಂತರ ಹಲವು ಅಡೆತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದೆ. ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ನಾಲ್ಕು ಸಾರಿಗೆ ನಿಗಮಗಳಿಂದ 1000 ಕ್ಕೂ ಹೆಚ್ಚು ಮೃತರ ಅವಲಂಬಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ 1 ಕೋಟಿ ರೂ. ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ 10 ಲಕ್ಷ ರೂ.ಗಳನ್ನು ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
KSRTC ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ (ವಾಸು) ಮಾತನಾಡಿ, ಕಳೆದ 8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಸಾರಿಗೆ ಸಚಿವರು ಸರ್ಕಾರದೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಚಾಲನಾ ಸಿಬ್ಬಂದಿಗಳ ನೇಮಕಾತಿಯು ಸಂಪೂರ್ಣವಾಗಿ ಪಾರದರ್ಶಕವಾಗಿದೆ. ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ನಿಮ್ಮ ಆಯ್ಕೆಯಂತೆ ಘಟಕ ನಿಯೋಜನೆ ಮಾಡಲಾಗಿದೆ. ಜವಾಬ್ದಾರಿಯುತ ಹುದ್ದೆಗೆ ನೇಮಕವಾಗುತ್ತಿದ್ದು, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನಿಗಮವನ್ನು ಆರ್ಥಿಕವಾಗಿ ಸಧೃಡಗೊಳಿಸಬೇಕೆಂದು ಕಿವಿ ಮಾತು ಹೇಳಿದರು.
ನಿಗಮದಲ್ಲಿ 2020ನೇ ಸಾಲಿನಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು. ಆ ನೇಮಕಾತಿ ಪ್ರಕ್ರಿಯೆಗಳು ಚಾಲನೆಯಲ್ಲಿದ್ದಾಗ ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ರಾಜ್ಯ ಸರ್ಕಾರವು 13-10-2023 ರಂದು 300 ತಾಂತ್ರಿಕ ಸಹಾಯಕ ಹಾಗೂ 2000 ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ಭರ್ತಿಮಾಡಲು ಅನುಮತಿ ನೀಡಿತು. ಆ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಜನವರಿ-2024ರಲ್ಲಿ ವಿಭಾಗ /ಘಟಕಗಳಿಗೆ ಹಂಚಿಕೆ ಮಾಡಲಾಯಿತು.
2000 ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಒಟ್ಟು 25,494 ಅರ್ಜಿಗಳು ಸ್ವೀಕೃತಗೊಂಡಿದ್ದವು. ದಾಖಲಾತಿ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಪೈಕಿ13954 ಅಭ್ಯರ್ಥಿಗಳು ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಅರ್ಹರಾಗಿದ್ದರು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹುಮ್ನಾಬಾದ್ ಚಾಲನಾ ತರಬೇತಿ ಕೇಂದ್ರ ಮತ್ತು ಕರಾರಸಾ ನಿಗಮದ ಹಾಸನ ಚಾಲನಾ ತರಬೇತಿ ಕೇಂದ್ರಗಳಲ್ಲಿ ಪರೀಕ್ಷೆ ಪಡೆಯುಲು ಅವಕಾಶ ಕಲ್ಪಿಸಲಾಗಿತ್ತು.
ಅದರಂತೆ 2672 ಅಭ್ಯರ್ಥಿಗಳು ಹುಮ್ನಾಬಾದ್ ಹಾಗೂ 11,282 ಅಭ್ಯರ್ಥಿಗಳು ಹಾಸನ ತರಬೇತಿ ಕೇಂದ್ರಗಳಲ್ಲಿ ಚಾಲನಾವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದಾರೆ. ಚಾಲನಾ ವೃತ್ತಿ ಪರೀಕ್ಷೆಯು ಸಂಪೂರ್ಣ ಗಣಕೀಕೃತವಾಗಿದೆ. ಮೊದಲ ಬಾರಿಗೆ ಚಾಲನಾ ವೃತ್ತಿಪರೀಕ್ಷೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಲ್ಲಿ ಮೆರಿಟ್/ಮೀಸಲಾತಿ ಅನುಸಾರ 2000 ಹುದ್ದೆಗಳಿಗೆ 05-06-2025 ರಂದು ಸಂಭವನೀಯ ಆಯ್ಕೆಪಟ್ಟಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿತ್ತು.
ಇದೇ ಜೂನ್ 12ರಂದು ಅಂತಿಮ ಆಯ್ಕೆ ಪಟ್ಟಿಯನ್ನು ನಿಗಮದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಚಾಲಕ ಕಂ ನಿರ್ವಾಹಕ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಜೇಷ್ಠತೆ/ ಮೆರಿಟ್ ಆಧಾರದಲ್ಲಿ ಗಣಕೀಕೃತ ಕೌನ್ಸಿಲಿಂಗ ಮೂಲಕ ವಿಭಾಗ/ ಘಟಕಗಳಿಗೆ ನೇರವಾಗಿ ನಿಯೋಜಿಸಲಾಗಿದೆ.
ಈ ಸಂಬಂಧ 16-06-2025 ರಿಂದ 19-06-2025 ರವರೆಗೆ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ವಿಭಾಗ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು 05-7-2025 ರೊಳಗಾಗಿ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. 16-06-2025 ರಂದು ಕೌನ್ಸಿಲಿಂಗ್‌ನಲ್ಲಿ ವಿಭಾಗ ಆಯ್ಕೆಮಾಡಿಕೊಂಡ ಅಭ್ಯರ್ಥಿಗಳ ಪೈಕಿ 50/50 ಅಂಕಗಳಿಸಿರುವ ಅಭ್ಯರ್ಥಿಗಳಿಗೆ ಇಂದು ಅಂದರೆ 17-06-2025 ರಂದು ಕೇಂದ್ರ ಕಚೇರಿಯಲ್ಲಿ ನಿಯೋಜನಾ ಆದೇಶ ವಿತರಿಸಲಾಯಿತು.
ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಕಳೆದ ಒಂದು ವರ್ಷದ ಅವಧಿಯಲ್ಲಿ 209 ಮೃತಾವಲಂಬಿತರಿಗೆ ನೌಕರಿ ನೀಡಲಾಗಿದೆ. ನಾಲ್ಕು ಸಾರಿಗೆ ನಿಗಮದಲ್ಲಿ 1,000 ಮೃತಾವಲಂಭಿತರಿಗೆ ನೇಮಕಾತಿ ನೀಡಲಾಗಿದೆ. ಒಟ್ಟಾರೆ ನಿಗಮದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ತಿಳಿಸಿದರು.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...