Please assign a menu to the primary menu location under menu

ಆರೋಗ್ಯ

ಜನರ ಗುಂಪು ತಡೆಯಿರಿ: ಅಧಿಕಾರಿಗಳಿಗೆ ಡಿಸಿ ಸಲಹೆ

ಒಬ್ಬರಿಂದೊಬ್ಬರಿಗೆ ಕೊರೋನಾ ವೈರಸ್ ತೀವ್ರ ಹರಡದಂತೆ ಮುಂಜಾಗ್ರತೆ

ವಿಜಯಪಥ ಸಮಗ್ರ ಸುದ್ದಿ

ಬೀದರ: ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳದಲ್ಲಿ ಒಬ್ಬರಿಂದೊಬ್ಬರಿಗೆ ಕೊರೋನಾ ವೈರಸ್ ತೀವ್ರ ಹರಡುವ ಕಾರಣ ಸಾಧ್ಯವಾದಷ್ಟು ಒಂದೇ ಕಡೆ ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ತಹಸೀಲ್ದಾರರಿಗೆ ನಿರ್ದೇಶನ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಣ್ಗಾವಲು ಘಟಕದಿಂದ ಮಾ.17ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೋನಾ ವೈರಸ್ ಸೋಂಕು ತಡೆಗಟ್ಟುವ ಮುಂಜಾಗೃತೆ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಧಾರ್ ನೋಂದಣಿ ಹಾಗೂ ಇನ್ನಿತರೆ ಕಾರ್ಯಕ್ಕಾಗಿ ತಹಸೀಲ್ ಕಚೇರಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆಂದು ಎಲ್ಲ ತಹಸೀಲ್ದಾರರು ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಹಲವಾರು ಸೌಲಭ್ಯಗಳನ್ನು ಕೇಳಿ ಜನರು ಸಹಜವಾಗಿ ಸೇರುತ್ತಾರೆ. ನೀವು ಅವರಿಗೆ ತಿಳಿ ಹೇಳಿ ಗುಂಪಾಗಿ ಸೇರಿ ಬಾರದೇ ಒಬ್ಬೊಬ್ಬರಾಗಿ ಬರುವಂತೆ ತಿಳಿಸಿ ಜನರು ಪರಸ್ಪರ ಸಂಪರ್ಕವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕೊರೋನಾ ವೈರಸ್ ಸಾವಿನ ಕಾಟವೆಂಬಂತೆ ಬಿಂಬಿತವಾಗುತ್ತಿದೆ. ಒಬ್ಬರಿಂದೊಬ್ಬರಿಗೆ ಹರಡದಂತೆ ನೋಡಿಕೊಳ್ಳುವುದೊಂದೇ ಇರುವ ಪರಿಹಾರ ಮಾರ್ಗವಾಗಿದೆ. ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಬಿಂಬಿತವಾಗಿರುವ ಈ ಕೊರೋನಾ ವೈರಸ್ ತಡೆಯುವ ಕಾರ್ಯದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಭಾಗವಹಿಸಬೇಕಿದೆ. ಹೀಗಾಗಿ ಆಯಾ ತಾಲೂಕುಗಳಲ್ಲಿ ಒಂದು ತಿಂಗಳ ಕಾಲ ಎಲ್ಲಿಯೂ ಜಾತ್ರೆ, ಉತ್ಸವಗಳು ಆಗದಂತೆ ನೋಡಿಕೊಳ್ಳಬೇಕು ಎಂದು  ಸೂಚಿಸಿದರು.

Leave a Reply

error: Content is protected !!
LATEST
ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು? ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು