Please assign a menu to the primary menu location under menu

NEWSನಮ್ಮರಾಜ್ಯ

ಏ.17ರಂದು ಮತ್ತೆ 44 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ ಒಟ್ಟು 359ಕ್ಕೇರಿದ ಸೋಂಕಿತರ ಸಂಖ್ಯೆ l ದೇಶದಲ್ಲಿ 13,495 ಮಂದಿಗೆ ಸೋಂಕು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರಿನಲ್ಲಿ ಇಂದು ಒಂದೇ ದಿನ 12 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಇದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅದರ ಜತೆಗೆ ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳಗೆ 44 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಇನ್ನು ಹೊಸ 44 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 359ಕ್ಕೆ ಏರಿಕೆಯಾಗಿದೆ.  ಬೆಂಗಳೂರಿನಲ್ಲಿ 9, ಬಳ್ಳಾರಿಯಲ್ಲಿ 7, ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಮೂರು ಹಾಗೂ ಬೀದರ್‌- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಇನ್ನು ವಿಜಯಪಯರದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ನಿನ್ನೆವರೆಗೆ 76 ಇತ್ತು ಇಂದು 9 ಮಂದಿಗೆ ಸೋಂಕು ದೃಢಪಟ್ಟಿದ್ದು, 85ಕ್ಕೇರಿದೆ. ಇನ್ನು ಮೈಸೂರಿನಲ್ಲಿ ನಿನ್ನೆ 61 ಇದ್ದು, ಇಂದು 12 ಹೊಸ ಪ್ರಕರಣ ಪಾಸಿಟಿವ್‌ ಆಗಿದ್ದು, 73 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

ಇದನ್ನೂ ಇಂದು ಮತ್ತೆ ರಾಜ್ಯದ 34 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ ಈವರೆಗೆ 13ಮಂದಿ ಅಸುನೀಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.

ಇನ್ನು ದೇಶದಲ್ಲಿ ಈವರೆಗೆ 13,495 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 448 ಮಂದಿ ಮೃತಪಟ್ಟಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 21,48,714 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,46,898 ಜನರು ಮೃತಪಟ್ಟಿದ್ದಾರೆ. 5,53,227 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.

Leave a Reply

error: Content is protected !!
LATEST
ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು ಬಡವರಿಗೆ ನೆರವಾಗುತ್ತಿವೆ ಪಂಚ ಗ್ಯಾರಂಟಿ ಯೋಜನೆಗಳು: ಸಚಿವ ಮಧುಬಂಗಾರಪ್ಪ