VIJAYAPATHA.IN > ವಿಜಯಪಥ > NEWS > ನಮ್ಮಜಿಲ್ಲೆ > ಮೊಬೈಲ್ ಕ್ಲಿನಿಕ್ ಉಪಯೋಗ ಪಡೆಯಿರಿ
ಮೈಸೂರು: ಮನೆ ಮನೆಗೆ ವೈದ್ಯಕೀಯ ಸೇವೆ ತಲುಪಿಸಲು ನೂತನ ಕೋವಿಡ್ -19 ಮೊಬೈಲ್ ಕ್ಲಿನಿಕ್ ವ್ಯವಸ್ಥೆಯನ್ನು ಹೊಂದಿರುವ ಮೊಬೈಲ್ ವ್ಯಾನ್‍ಗಳ ಸೇವೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯನ್ನು ಕೊರೊನಾ ಮುಕ್ತ ಮಾಡಲು ಜಿಲ್ಲಾಡಳಿತ ಹಾಗೂ ವೈದ್ಯಕೀಯ ಸಿಬ್ಬಂದಿ ಉತ್ತಮ ಕಾರ್ಯವನ್ನು ಮಾಡುತ್ತಿದ್ದಾರೆ. ಅವರಿಗೆ ನನ್ನ ಹಾಗೂ ಸರ್ಕಾರದ ಪರವಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಗುವುದು. ನಂಜನಗೂಡಿನಲ್ಲಿಯೂ ಸಹ ಈ ಮೊಬೈಲ್ ಕ್ಲಿನಿಕ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೇಯರ್ ತಸ್ನೀಂ, ಉಪಮೇಯರ್ ಶ್ರೀಧರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಇತರರು ಇದ್ದರು.
Related
Editordev
Leave a reply