Please assign a menu to the primary menu location under menu

NEWSನಮ್ಮರಾಜ್ಯ

ಮೇ 2ರ ಸಂಜೆಗೆ ರಾಜ್ಯದಲ್ಲಿ 12 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆವೇಳೆಗೆ ಹೊಸದಾಗಿ ಮೂರು ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 601 ಏರಿಕೆಯಾಗಿದೆ.  ಇವುಗಳಲ್ಲಿ 25 ಜನರು ಮೃತಪಟ್ಟಿದ್ದು, 271 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.

ಬೆಂಗಳೂರು ನಗರದಲ್ಲಿ ಸಂಜೆವೇಳಗೆ ಮೂರು ಹೊಸ ಪ್ರಕರಣ ಪತ್ತೆಯಾಗಿದ್ದು, ಬೆಳಗ್ಗೆ ಒಂದು ಪ್ರಕರಣ ಪತ್ತೆಯಾಗಿತ್ತು ಜತೆಗೆ ತುಮಕೂರು, ವಿಜಯಪುರದಲ್ಲಿ ತಲಾ ಎರಡು ಮತ್ತು ಬೀದರ್‌, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲ್‌ಕೋಟೆ ತಲಾ ಒಂದೊಂದು ಪ್ರಕರಣ  ಪತ್ತೆಯಾಗಿದೆ.

ಇನ್ನು ರಾಜ್ಯದಲ್ಲಿ ಒಟ್ಟಾರೆ 601 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 271 ಮಂದಿ ಗುಣಮುಖರಾಗಿದ್ದಾರೆ. ಇನ್ನು 305  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 25 ಮಂದಿ ಮೃತಪಟ್ಟಿದ್ದಾರೆ.  ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 37,339 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 37,339 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,223 ಮಂದಿ ಮೃತಪಟ್ಟಿದ್ದಾರೆ. 10,007 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 34,24,210  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,40,380 ಜನರು ಮೃತಪಟ್ಟಿದ್ದಾರೆ. 10,93,704 ಮಂದಿ ರೋಗದಿಂದ .

Leave a Reply

error: Content is protected !!
LATEST
ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು? ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್ ವಯನಾಡಲ್ಲಿ ಮಹಿಳೆ ಕೊಂದು ತಿಂದಿದ್ದ ಹೆಣ್ಣು ಹುಲಿ ಸಾವು