Please assign a menu to the primary menu location under menu

NEWSನಮ್ಮರಾಜ್ಯ

ಮೇ 4ರ ಸಂಜೆ ವೇಳೆಗೆ ರಾಜ್ಯದಲ್ಲಿ 37 ಕೊರೊನಾ ಸೋಂಕು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 37 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 651 ಏರಿಕೆಯಾಗಿದೆ.

ಇವುಗಳಲ್ಲಿ 27 ಜನರು ಮೃತಪಟ್ಟಿದ್ದು, 321 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ದಾವಣಗೆರೆಯಲ್ಲಿ22 , ಬೀದರ್‌ 7,  ಕಲಬುರಗಿ  ಮತ್ತು ಮಂಡ್ಯದಲ್ಲಿ ತಲಾ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು, ಹಾವೇರಿ, ಚಿಕ್ಕಬಳ್ಳಾಪುರ, ವಿಜಯಪುರದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.  ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 642 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 321 ಮಂದಿ ಗುಣಮುಖರಾಗಿದ್ದಾರೆ. ಇನ್ನು 303  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 27 ಮಂದಿ ಮೃತಪಟ್ಟಿದ್ದಾರೆ.  ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 42,679  ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 42,679 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,396 ಮಂದಿ ಮೃತಪಟ್ಟಿದ್ದಾರೆ. 11,782 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 35,81,871 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,48,555 ಜನರು ಮೃತಪಟ್ಟಿದ್ದಾರೆ. 11,59,500 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ..

Leave a Reply

error: Content is protected !!
LATEST
ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು? ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ ಸಾರಿಗೆ ನೌಕರರಿಂದ ಮನವಿ ಪತ್ರ ಸಲ್ಲಿಸುವ ಚಳವಳಿ ಆರಂಭ: ಸಿಎಂ, ಸಾರಿಗೆ ಮಂತ್ರಿ, ನಾಲ್ಕೂ ನಿಗಮಗಳ ಎಂಡಿಗಳಿಗೆ ಸಲ್ಲಿಕೆ 110 ಹಳ್ಳಿಗಳ ಕೊಳವೆ ಬಾವಿಗಳು ಜಲಮಂಡಳಿ ಸುಪರ್ದಿಗೆ: ತುಷಾರ್ ಗಿರಿನಾಥ್